ಗೋಕಾಕ:ನಾಳೆಯಿಂದ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಗೆ: ಬಿಇಓ ಜಿ.ಬಿ.ಬಳಗಾರ ಮಾಹಿತಿ
ನಾಳೆಯಿಂದ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಗೆ: ಬಿಇಓ ಜಿ.ಬಿ.ಬಳಗಾರ ಮಾಹಿತಿ
ಗೋಕಾಕ ಮಾ 30 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿಯಮಗಳನ್ನು ಪಾಲಿಸಿ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಳೆ ದಿ. 31ರಿಂದ ಎಪ್ರಿಲ್ 15 ವರೆಗೆ ಪರೀಕ್ಷೆಗಳು ಜರುಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗೋಕಾಕ ವಲಯದಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 4,761 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕಾರ್ಯಕ್ಕಾಗಿ ಕೋಠಡಿ ಮೇಲ್ವಿಚಾರಕರು , ಮಾರ್ಗಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು ಸೇರಿದಂತೆ ಒಟ್ಟು 94 ಮೇಲುಸ್ತುವಾರಿ ಸಿಬ್ಬಂದಿಗಳು ಹಾಗೂ 20೦ ಜನ ಕೋಠಡಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪರೀಕ್ಷಾ ಸಿದ್ದೆತೆಗಾಗಿ ಹಲವಾರು ಸಭೆಗಳನ್ನು ಮಾಡಿ ಸೂಕ್ತ ತರಬೇತಿ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ ಸುತ್ತ ನಿಷೇಧಾಜ್ಞೆ ಘೋಷಿಸಲಾಗಿದ್ದು, ಜರಾಕ್ಸ ಅಂಗಡಿಗಳನ್ನು ಮುಚ್ಚಲು ತಾಲೂಕಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳಲ್ಲಿ ಭಯಮುಕ್ತ ವಾತಾವರಣ ನಿರ್ಮಿಸಲು , ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಹೂಗಳನ್ನು ನೀಡಿ ಸ್ವಾಗತಿಸಲಾಗುವದು. ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹೆಫ್ತ ಡೆಸ್ಕಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವ ಕೊಠಡಿಯಲ್ಲಿ ಅವರ ನಂಬರ ಬಂದಿದೆ ಎಂದು ಮುಂಚಿತವಾಗಿ ತಿಳಿಸಲು ಕ್ರಮ ಜರುಗಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿಯಮಗಳು ಪ್ರಕಾರ ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯ ಅಧಿಕ್ಷರು ಹಾಗೂ ಪರೀಕ್ಷಾ ಸಿಬ್ಬಂದಿಗಳು ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ ಪರೀಕ್ಷಾ ಕೊಠಡಿಗಳಿಗೆ ತೆರಳಲು ಮಾರ್ಗದರ್ಶನ ಮಾಡಲಿದ್ದಾರಲ್ಲದೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.
ವಿದ್ಯಾರ್ಥಿಗಳು ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ , ಪೊಲೀಸ ಇಲಾಖೆ, ಕಂದಾಯ ಇಲಾಖೆ , ನಗರಸಭೆ, ಶಿಶು ಅಭಿವೃದ್ಧಿ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪಾಲಕರು ಯಾವುದೇ ಭಯವಿಲ್ಲದೆ ವಿದ್ಯಾರ್ಥಿಗಳನ್ನು ಪರೀಕ್ಷೆ ಕಳುಹಿಸಬೇಕೆಂದು ಬಿಇಓ ಜಿ.ಬಿ.ಬಳಗಾರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.