ಗೋಕಾಕ:ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನನ್ನ ಆಯ್ಕೆ ಮಾಡಿದ ಪಕ್ಷದ ಮುಖಂಡರಿಗೆ ಕೃತಜ್ಞತೆ : ಡಾ.ಮಹಾಂತೇಶ ಕಡಾಡಿ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನನ್ನ ಆಯ್ಕೆ ಮಾಡಿದ ಪಕ್ಷದ ಮುಖಂಡರಿಗೆ ಕೃತಜ್ಞತೆ : ಡಾ.ಮಹಾಂತೇಶ ಕಡಾಡಿ
ಗೋಕಾಕ ಏ 7 : ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನನ್ನ ಆಯ್ಕೆ ಮಾಡಿದ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಮತ್ತು ರಾಷ್ಟ್ರೀಯ ನಾಯಕರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿ ಹೇಳಿದರು.
ಶುಕ್ರವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ಷೇತ್ರದ ಸರ್ವೆ ಆಧರಿಸಿ ನನ್ನನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ ಅವರು ನನ್ನ ಮೇಲೆ ವಿಶ್ವಾಸ ಇಟ್ಟು ಟಿಕೆಟ್ ನೀಡಿದ್ದಾರೆ ಅವರ ವಿಶ್ವಾಸ ಉಳಿಸಿಕೊಂಡು ಚುನಾವಣಾ ಎದುರಿಸುತ್ತೇನೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಅನೇಕ ನಾಯಕರು ಹೈಕಮಾಂಡಗೆ ನನ್ನ ಹೆಸರು ಶಿಫಾರಸು ಮಾಡಿದ್ದರು ಅವರಿಗೂ ಈ ಸಂದರ್ಭದಲ್ಲಿ ನಾನು ಆಭಾರಿಯಾಗಿದ್ದೇನೆ ಎಂದ ಅವರು ಗೋಕಾಕ ಮತಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ನನ್ನ ಜೊತೆ 4 ಜನರು ಅರ್ಜಿಯನ್ನು ಸಲ್ಲಿಸಿದರು. ನನಗೆ ಪಕ್ಷ ಟಿಕೆಟ್ ನೀಡಿದ ಪರಿಣಾಮ ಅವರೆಲ್ಲರು ನನಗೆ ತಮ್ಮ ಬೆಂಬಲ ಘೋಷಿಸಿದ್ದಾರೆ ಎಂದು ಹೇಳಿದರು.
ಗೋಕಾಕ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ. ಎಲ್ಲರೂ ವಯಕ್ತಿಕ ದ್ವೇಷವನ್ನು ಬಿಟ್ಟು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಜನರ ಅಭಿಲಾಷೆಗೆ ತಕ್ಕಂತೆ ನಡೆದುಕೊಳ್ಳಬೇಕು. ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿಗೆ ತಡೆಒಡ್ಡುವ ವಾತಾವರಣ ಇದೆ ಅದನ್ನು ಬದಲಾವಣೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಮತದಾರರು ಈ ಅವಕಾಶದ ಸದುಪಯೋಗ ಪಡೆದುಕೊಂಡು ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡುವ ಮೂಲಕ ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಅಶೋಕ್ ಪೂಜಾರಿ ಅವರ ಮನವಲಿಸುವೆ : ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಪೂಜಾರಿ ಅವರು ನನಗೆ ಟಿಕೆಟ್ ಘೋಷಣೆಯಾಗಿದ್ದಕ್ಕೆ ಸಲ್ಪ ಬೇಜಾರು ವ್ಯಕ್ತಪಡಿಸಿದ್ದಾರೆ. ಅವರು ಬೆಂಬಲಿಗರು ಪ್ರತಿಭಟನೆಯನ್ನು ಸಹ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸಾಮಾನ್ಯ ಪ್ರತಿಕ್ರಿಯೆಯಾಗಿದ್ದು, ಪಕ್ಷ ಯಾರಿಗಾದರೂ ಟಿಕೆಟ್ ನೀಡಿದರು ಅವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿ ಈಗಾಗಲೇ 3 ಆಕಾಂಕ್ಷಿಗಳು ನನಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಅಶೋಕ್ ಪೂಜಾರಿ ಅವರು ಹಿರಿಯ , ಅನುಭವಿ ರಾಜಕಾರಣಿ ಅವರನ್ನು ನಾನು ಖುದ್ದು ಭೇಟಿಯಾಗಿ ಅವರ ಮನವಲಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚಂದ್ರಶೇಖರ್ ಕೊಣ್ಣೂರ, ಇಮ್ರಾನ್ ತಪಕೀರ ಉಪಸ್ಥಿತರಿದ್ದರು.