ಗೋಕಾಕ:ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿರುವ ರಮೇಶ ಜಾರಕಿಹೊಳಿ ಅವರನ್ನು 50ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ : ಅಮರನಾಥ
ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿರುವ ರಮೇಶ ಜಾರಕಿಹೊಳಿ ಅವರನ್ನು 50ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ : ಅಮರನಾಥ
ಗೋಕಾಕ ಏ 27 : ಕಳೆದ 6 ಬಾರಿ ಗೋಕಾಕ ಮತಕ್ಷೇತ್ರದ ಶಾಸಕರಾಗಿ, ಈ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ರಮೇಶ ಜಾರಕಿಹೊಳಿ ಅವರನ್ನು 50ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕ್ಷೇತ್ರದ ಜನತೆ ಮಾಡುವಂತೆ ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು.
ಅವರು, ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅವರ ತಂದೆ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ಮತಯಾಚನೆ ನಡೆಸಿ ಮಾತನಾಡಿ ನನ್ನ ತಂದೆ ರಮೇಶ ಜಾರಕಿಹೊಳಿ ಅವರ ಜನಪರ ಹಾಗೂ ರೈತಪರ ಕೆಲಸಗಳನ್ನು ಮನಗಂಡು ಬಿಜೆಪಿಗೆ ಮತ ನೀಡಿ ಅವರನ್ನು ಆಯ್ಕೆ ಮಾಡುವಂತೆ ಕೋರಿದರು.
ರಾಜ್ಯದಲ್ಲಿಯೇ ಗೋಕಾಕ ಮತಕ್ಷೇತ್ರವನ್ನು ಇತರರು ನೋಡುವಂತೆ ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ಕಾರ್ಯಕರ್ತರು ತಮ್ಮಲ್ಲಿನ ಸ್ಥಾನಿಕ ಕೆಲ ಮನಸ್ತಾಪಗಳನ್ನು ಮರೆತು ಮೇ10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಮುನ್ನಡೆ ನೀಡಬೇಕು. ಕನಿಷ್ಠ 50ಸಾವಿರಕ್ಕೂ ಅಧಿಕ ಮತಗಳ ಲೀಡ್ ನೀಡಿ ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನನ್ನ ತಂದೆ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಜಾತ್ಯಾತೀತವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆಧುನಿಕ ಬಸವಣ್ಣನವರಂತೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಆರಿಸಿ ತರಬೇಕು ಎಂದು ಮನವಿ ಮಾಡಿದರು.
ಯುವ ಧುರೀಣ ಅಮರನಾಥ ಜಾರಕಿಹೊಳಿ ಅವರನ್ನು ಸಾವಳಗಿಯ ಗ್ರಾಮಸ್ಥರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು-ಸದಸ್ಯರು, ಪಿಕೆಪಿಎಸ್ ಅಧ್ಯಕ್ಷರು-ಸದಸ್ಯರು, ಜನಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.