ಬೆಳಗಾವಿ:ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ
ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ ಜೂ 11 : ಮಹಿಳೆಯರು ಸ್ವಾವಲಂಬನೆ, ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿ ಮುಂತಾದ ಉದ್ದೇಶಗಳಿಗೆ ‘ಶಕ್ತಿ’ ಯೋಜನೆ ಬಳಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ವತಿಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ “ಶಕ್ತಿ” ಯೋಜನೆಗೆ ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಬಸ್ ಉಚಿತವಿದೆ ಎಂದು ಬಳಸಿಕೊಳ್ಳುವುದಲ್ಲ. ಸದುದ್ದೇಶಕ್ಕೆ ಬಳಕೆಯಾಗಬೇಕು. ಇದರಿಂದ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚು ಬೆಳವಣಿಗೆ ಆಗುತ್ತವೆ. ಈಗಾಗಲೇ ನಷ್ಟದಲ್ಲಿರುವ ಸಂಸ್ಥೆಗಳಿಗೆ ಪುನಶ್ಚೇತನ ಸಿಗಲಿದೆ. ಮಹಿಳೆಯರ ಪ್ರಯಾಣದ ದರವನ್ನು ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಭರಿಸಲಿದೆ. ಸಂಸ್ಥೆಯಲ್ಲಿ ಉದ್ಯೋಗಗಳ ಹೆಚ್ಚಲಿವೆ’ ಎಂದರುಉಚಿತ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳಿಂದ ಸರ್ಕಾರಕ್ಕೆ ₹60 ಸಾವಿರ ಕೋಟಿ ಹೊರೆಯಾಗಲಿದೆ. ಆದರೆ, ಮಹಿಳೆಯರ ಓಡಾಟದಿಂದ ವ್ಯಾವಹಾರಿಕ ಚಟುವಟಿಕೆಗಳು ಹೆಚ್ಚಲಿವೆ. ಪರೋಕ್ಷವಾಗಿ ತೆರಿಗೆ ಹೆಚ್ಚು ಸಂಗ್ರಹವಾಗಲಿದೆ’ ಎಂದರು.