ಗೋಕಾಕ:ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ
ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ
ಗೋಕಾಕ ಜು 2 : ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ ಎಂದು ಉಪ ಪ್ರಾಚಾರ್ಯ ಎಂ. ಬಿ ಬಳಿಗಾರ ಹೇಳಿದರು
ಶನಿವಾರದಂದು ಇಲ್ಲಿನ ಆಶಾ ಕಿರಣ ಕಲಾ ಟ್ರಸ್ಟ್ ವತಿಯಿಂದ ಸನ್ 2022-23 ನೇ ಸಾಲಿನಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು.ಸುಲಲಿತವಾದ ಕನ್ನಡ ಭಾಷೆಯನ್ನು ಹೆಚ್ಚು ಉಪಯೋಗಿಸಬೇಕು. ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಮೆ ನಮ್ಮ ಕನ್ನಡ ಭಾಷೆಯದ್ದಾಗಿದೆ.ಇದನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 20ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸತ್ಕರಿಸಿ, ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ಆಶಾ ಕಿರಣ ಕಲಾ ಟ್ರಸ್ಟನ ಮಾಲತಿಶ್ರೀ, ಚಂದ್ರಶೇಖರ ಅಕ್ಕಿ, ಅಶೋಕ ಪೂಜಾರಿ, ಮಹಾಂತೇಶ ತಾಂವಶಿ, ಶಾಮಾನಂದ ಪೂಜೇರಿ, ವಿ ಎಮ್ ವಣ್ಣೂರ, ರಜನಿ ಜಿರಗ್ಯಾಳ, ಸಂಗೀತಾ ಬನ್ನೂರ ಇದ್ದರು.