ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ
ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ
ಗೋಕಾಕ ಸೆ 27 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಹೇಳಿದರು.
ಅವರು, ಬುಧವಾರದಂದು ನಗರದ ಲಕ್ಷ್ಮೀ ಏಜ್ಯುಕೇಶನ ಟ್ರಸ್ಟನ ಕ್ರೀಡಾಂಗಣದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಚಿಕ್ಕೋಡಿ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಖೋಖೋ ಹಾಗೂ ಸೈಕ್ಲೀಂಗ್ ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೋತ್ಸಾಹಿಸಿಕೊಳ್ಳಿ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಆರೋಗ್ಯ ವೃದ್ಧಿಯೊಂದಿಗೆ ಪರಸ್ಪರರಲ್ಲಿ ಪ್ರೀತಿ ವಿಶ್ವಾಸವು ಬೆಳೆಯುತ್ತದೆ. ಸೋಲು ಗೆಲುವಿಗೆ ಮಹತ್ವ ನೀಡದೇ ನಿರ್ಣಾಯಕರು ನೀಡಿದ ತೀರ್ಪಿಗೆ ಬದ್ಧರಾಗಿ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರತಿಭಾನ್ವಿತರಾಗಿರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ದೈಹಿಕ ಶಿಕ್ಷಣಾಧಿಕಾರಿ ಎಲ್ ಕೆ ತೋರಣಗಟ್ಟಿ, ಆಡಳಿತಾಧಿಕಾರಿ ಬಿ ಕೆ ಕುಲಕರ್ಣಿ, ಪ್ರಾಚಾರ್ಯ ಅರುಣ ಪೂಜೇರ ಇದ್ದರು.