ಗೋಕಾಕ:ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆ ಪ್ರತಿಭಟನೆ
ಗೋಕಾಕ ಸೆ 29 : ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮರಕುಂಬಿ ನೇತೃತ್ವದಲ್ಲಿ ನೂರಾರುಜನ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಸೇರಿದ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬಸವೇಶ್ವರ ವೃತ್ತ ಮಾರ್ಗವಾಗಿ ಮಿನಿವಿಧಾನ ಸೌಧ ತಹಶೀಲದಾರ ಕಾರ್ಯಲಯದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖಂಡರುಗಳು ಕಾವೇರಿ ಸೇರಿದಂತೆ ಕರ್ನಾಟಕದ ಇನ್ನಿತರ ನದಿಗಳ ವಿಷಯದಲ್ಲಿ ಪದೇ ಪದೇ ಅನ್ಯಾಯವಾಗುತ್ತಿದೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಕೃಷಿಗೆ ಮಾತ್ರವಲ್ಲದೇ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಇಂತಹ ಸಂದರ್ಭದಲ್ಲಿ ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವದು ದುರದೃಷ್ಟಕರ ಸಂಗತಿ. ಸರಕಾರ ಕನ್ನಡ ಭಾಷೆ ನೆಲ ಜಲದ ವಿಷಯದಲ್ಲಿ ಕಠೀಣ ನಿರ್ಧಾರ ತೆಗೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಹರಿಸಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳುವದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಈರಯ್ಯ ಪೂಜಾರಿ, ಬಾಳೇಶ ಇಂಚಲ, ನಿಂಗವ್ವಾ ಪೊತಲಿ, ತಾಲೂಕ ಅಧ್ಯಕ್ಷ ನಿಂಗಪ್ಪ ಇಂಚಲ, ಸುರೇಶ ನೇಗಿನಾಳ, ಲಕ್ಷ್ಮೀ ಕಳ್ಳಿಗುದ್ದಿ, ಮಂಜುನಾಥ ಜಲ್ಲಿ, ಬಸು ಇಳಿಗೇರ, ಸವೀತಾ ಇಂಚಲ, ಬಾಲಗೌಡ ಪಾಟೀಲ, ಬಸವರಾಜ ನುಗ್ಗಾನಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.