ಗೋಕಾಕ:ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ
ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ
ಗೋಕಾಕ ಅ 2 : ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತನನ್ನು ದೇಶದ ಬೆನ್ನಲುಬು ಎನ್ನುತ್ತೇವೆ ಅದೇ ಹಸುಗಳು ರೈತನ ಕುಟುಂಬದ ಬೆನ್ನೆಲುಬು ಅನ್ನೋದು ಅμÉ್ಟೀ ಸತ್ಯ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಪಶು ಸಖಿಯವರಿಗೆ ಪ್ರಥಮ ಚಿಕಿತ್ಸಾ ಕೀಟ್ ವಿತರಣೆ ಹಾಗೂ ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆ ವಿತರಣೆ ಅಭಿಯಾನಕ್ಕೆ ಹಸುವಿಗೆ ಪೂಜೆ ನೆರವೇರಿಸಿ ಹಣ್ಣು ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕೃಷಿಯ ಬೆನ್ನೆಲುಬು ಪಶುಸಂಗೋಪನೆ. ಪಶು ಸಂಪತ್ತಿಗೆ ಪ್ರಾಚೀನ ಕಾಲದಿಂದಲೂ ಮಹತ್ತರವಾದ ಸ್ಥಾನ ದೊರೆತಿದೆ ಹಾಗೂ ಪಶುಸಂಗೋಪನೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಜಾನುವಾರುಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ, ಲಸಿಕೆಗಳನ್ನು ನೀಡಿ ಅವುಗಳ ರಕ್ಷಣೆ ಮಾಡಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಕರೆ ನೀಡಿದರು.
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಮೋಹನ ಕಮತ, ಮಾಜಿ ಶಾಸಕ ಎಮ್ ಎಲ್ ಮುತ್ತೇನ್ನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ನಗರಸಭೆ ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಜಯಾನಂದ ಹುಣಚ್ಯಾಳಿ, ಬಸವರಾಜ ಆರೇನ್ನವರ, ಪ್ರಕಾಶ ಮುರಾರಿ, ವಿಜಯ ಜತ್ತಿ, ಬೂದಿಹಾಳ ಸೇರಿದಂತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಿಬ್ಬಂಧಿಗಳು ಅನೇಕರು ಇದ್ದರು.