RNI NO. KARKAN/2006/27779|Thursday, November 21, 2024
You are here: Home » breaking news » ಗೋಕಾಕ;ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ

ಗೋಕಾಕ;ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ 

ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ
ಗೋಕಾಕ ನ 30 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ ಹೇಳಿದರು.
ಅವರು, ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡುತ್ತ ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯ ಕಾಪಾಡಲು ಕ್ರೀಡೆಗಳು ಸಹಕಾರಿಯಾಗುತ್ತವೆ. ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವದರಿಂದ ಪರಸ್ಪರರಲ್ಲಿ ಪ್ರೀತಿ ವಿಶ್ವಾಸವು ಹೆಚ್ಚುತ್ತದೆ. ತಮ್ಮಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ ಇಂತಹ ವೇದಿಕೆಗಳ ಸದುಪಯೋಗದಿಂದ ಸಾಧಕರಾಗಿರೆಂದು ಹಾರೈಸಿದರು.
ಈ ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗವು 54ಚಿನ್ನ, 35ಬೆಳ್ಳಿ, 29ಕಂಚಿನ ಪದಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದೆ. ಗೋಕಾಕ ವಿಭಾಗವು 45ಚಿನ್ನ, 27ಬೆಳ್ಳಿ, 24ಕಂಚಿನ ಪದಕಗಳನ್ನು ಪಡೆದು ದ್ವೀತಿಯ ಸ್ಥಾನ ಹಾಗೂ ಬಾಗಲಕೋಟೆ ವಿಭಾಗವು 34ಚಿನ್ನ, 30ಬೆಳ್ಳಿ, 14ಕಂಚಿನ ಪದಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದೆ.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಸ್ ಕೆ ಕಲ್ಲೋಳಕರ, ಪಿ ಶ್ರೀಧರ, ಆರ್ ಎಸ್ ನಾಗಶೆಟ್ಟಿ, ಕೆ ಎಸ್ ಗೊರವರ, ಸಿ ಜಿ ಮಿರ್ಜಿ, ಶಿವಶರಣಯ್ಯ, ವನಿತಾ ಆರ್, ಶಿವಾನಂದ ನಾಯಕವಾಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಾಸೀಮರಾಜ ತೇನಗಿ, ಸುನೀತ ನಿಂಬರಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಸೇರಿದಂತೆ ಅರಣ್ಯಾಧಿಕಾರಿಗಳು, ಸಿಬ್ಬಂಧಿ ವರ್ಗದವರು ಇದ್ದರು.

Related posts: