RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ 

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ
ಗೋಕಾಕ ಡಿ 3 : ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸಂತೋಷ ತಡಸಲ ಹೇಳಿದರು.
ಅವರು, ರವಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಾಂಸ್ಕøತಿ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುವದರೊಂದಿಗೆ ಸಾಧಕರಾಗಲು ಸಾಧ್ಯ. ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದು, ಅದನ್ನು ಇಂತಹ ವೇದಿಕೆಗಳ ಮೂಲಕ ಪ್ರದರ್ಶಿಸಿ ಪ್ರತಿಭಾನ್ವಿತರಾಗಿರಿ. ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರವನ್ನು ಪಡೆದು ಉತ್ತಮ ನಾಗರಿಕರಾಗಿರೆಂದು ಹಾರೈಸಿದರು.
ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸಿದರು.
ವೇದಿಕೆಯ ಮೇಲೆ ಆಡಳಿತಾಧಿಕಾರಿ ಬಿ ಕೆ ಕುಲಕರ್ಣಿ, ಪ್ರಾಚಾರ್ಯ ಐ ಎಸ್ ಪವಾರ, ಉಪನ್ಯಾಸಕರಾದ ಎಮ್ ಯು ಕಂಬಾರ, ಕೆ ಎಸ್ U್ಫಡಿವಡ್ಡರ, ವಿದ್ಯಾರ್ಥಿ ಪ್ರತಿನಿಧಿಗಳಾದ ಸ್ವಾತಿ ಪಲ್ಲೇದ, ಕೀರ್ತಿ ಸಸಾಲಟ್ಟಿ, ಪ್ರೀಯಾಂಕಾ ಪಾಟೀಲ, ಅರುಣಾ ಅಜ್ಜಪ್ಪಗೋಳ ಇದ್ದರು.
ರುಮಾನಾ ಮುಲ್ಲಾ ಸ್ವಾಗತಿಸಿದರು, ವಿಜಯಶ್ರೀ ಹಿರೇಮಠ ನಿರೂಪಿಸಿದರು. ಚೈತ್ರಾ ಕಮ್ಮಾರ ವಂದಿಸಿದರು.

Related posts: