RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಗಜಾನನ ಮನ್ನಿಕೇರಿ

ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಗಜಾನನ ಮನ್ನಿಕೇರಿ 

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಗಜಾನನ ಮನ್ನಿಕೇರಿ

ಗೋಕಾಕ ಜ 14 : ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನು ಒಳ್ಳೆಯ ನಾಗರಿಕರನ್ನಾಗಿ ಮಾಡುವಂತೆ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ಅವರು, ಶನಿವಾರದಂದು ನಗರದ ಮಯೂರ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತ, ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರ ಹಾಗೂ ಸಂಸ್ಥೆಗಳು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ. ಪಾಲಕರು ಶಿಕ್ಷಕರು ಹಾಗೂ ಸಂಸ್ಥೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಕಳೆದ ಐವತ್ತು ವರ್ಷಗಳಿಂದ ಈ ಭಾಗದ ಪ್ರಥಮ ಆಂಗ್ಲ ಮಾಧ್ಯಮ ಶಾಲೆಯಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಸ್ಥೆ ಶ್ರಮಿಸುತ್ತಿದ್ದು, ಈ ಸಂಸ್ಥೆ ಇನ್ನೂ ಹೆಮ್ಮರವಾಗಿ ಬೆಳೆಯಲಿ ಎಂದು ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ನರು ಹಾಗೂ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಿ ಗೌರವಿಸಿದರು.
ವೇದಿಕೆಯ ಮೇಲೆ ಸಂಸ್ಥೆಯ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ, ಕಾರ್ಯದರ್ಶಿ ಸದಾನಂದ ಕಲಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಆಡಳಿತಾಧಿಕಾರಿ ಎಸ್ ಡಿ ಮುರಗೋಡ, ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ ಇದ್ದರು.

Related posts: