ಗೋಕಾಕ:ಜನವರಿ 26 ರಿಂದ 30.ರವರೆಗೆ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥ: ತಹಶೀಲ್ದಾರ ಭಸ್ಮೆ ಮಾಹಿತಿ
ಜನವರಿ 26 ರಿಂದ 30.ರವರೆಗೆ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥ: ತಹಶೀಲ್ದಾರ ಭಸ್ಮೆ ಮಾಹಿತಿ
ಗೋಕಾಕ ಜ 24 : ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಯಾಗಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯವನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಡಾ.ಮೋಹನ ಭಸ್ಮೆ ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನ ಜಾಗೃತಿ ಜಾಥದ ಸ್ಥಬ್ಧಚಿತ್ರ ಜನವರಿ 26 ರಿಂದ 30 ರವರೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ. ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಪಂಚಾಯಿತಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಂಡು ಯಶಸ್ವಿಗೆ ಸಹಕರಿಸಬೇಕು.
ಮೆರವಣಿಗೆ ನಡೆಯಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥಾ ಸ್ವಾಗತಿಸಬೇಕು. ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು. ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಂಡು ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.