RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ

ಗೋಕಾಕ:ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ 

ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ

ಗೋಕಾಕ ಫೆ 21 : ಮಂಗಳವಾರದಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಕಛೇರಿಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ನಡೆದ ಸಭೆಯಲ್ಲಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭೆ ಅಭ್ಯರ್ಥಿ ಎಂದು ಆಯ್ಕೆ ಮಾಡಿ ಹೈಕಮಾಂಡ್ ಗೆ ಕಳುಹಿಸಬೇಕು ಎಂದು ಕಾರ್ಯಕರ್ತರು ಸಚಿವ ಸತೀಶ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕರುಗಳಾದ ಪ್ರಕಾಶ ಹುಕ್ಕೇರಿ, ನಾಗರಾಜ್ ಯಾಧವ, ಬಾಳಾಸಾಬ ಪಾಟೀಲ, ವಿಶ್ವಾಸ ವೈದ್ಯ, ಮಾಜಿ ಶಾಸಕರುಗಳಾದ ಶಾಮ ಘಾಟಗೆ, ಕಾಕಾಸಾಬ ಪಾಟೀಲ ಸೇರಿದಂತೆ ಜಿಲ್ಲೆಯ ಮುಖಂಡರುಗಳ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಬಹುತೇಕ ಎಲ್ಲಾ ಕಾರ್ಯಕರ್ತರು ಬೆಳಗಾವಿ ಲೋಕಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಅಭ್ಯರ್ಥಿ ಮಾಡಬೇಕು ಎಂದು ತಮ್ಮ ಅಭಿಪ್ರಾಯಗಳನ್ನು ಸಭೆಗೆ ತಿಳಿಸಿ ಮಾಡಲೇಬೇಕು ಎಂಬ ಒತ್ತಡ ಹಾಕಿದ್ದಾರೆ ಎಂಬ ಗುಸುಗುಸು ಚರ್ಚೆಗಳು ರಾಜಕೀಯ ಪಡಶಾಲೆಯಲ್ಲಿ ಕೇಳಿ ಬರುತ್ತಿವೆ.

Related posts: