ಗೋಕಾಕ:ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ಎಂಬ ಉದ್ದೇಶದಿಂದ ಫೌಂಡೇಶನ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ : ರಾಹುಲ್ ಜಾರಕಿಹೊಳಿ
ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ಎಂಬ ಉದ್ದೇಶದಿಂದ ಫೌಂಡೇಶನ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ : ರಾಹುಲ್ ಜಾರಕಿಹೊಳಿ
ಗೋಕಾಕ ಫೆ 25 : ಈ ಭಾಗದ ವಿದ್ಯಾರ್ಥಿಗಳು ಸಹ ಮುಂದೆ ಬಂದು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ಎಂಬ ಮಹತ್ತರ ಉದ್ದೇಶದಿಂದ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ ವಿವಿಧ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.
ರವಿವಾರದಂದು ನಗರದ ಹಿಲ್ ಗಾರ್ಡನ್ ಆವರಣದಲ್ಲಿ ಸತೀಶ ಶುಗರ್ಸ ಆವಾರ್ಡ್ಸ ಬಹುಮಾನ ವಿಜೇತ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹಮ್ಮಿಕೊಂಡ ಔಣತಕೂಟ ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಿ ಅವರು ಮಾತನಾಡಿದರು.
ಸತೀಶ್ ಶುಗರ್ಸ್ಸ ಆವಾರ್ಡ್ಸ ಮತ್ತು ಸತೀಶ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಯಶಸ್ವಿಯಾಗಿ ಮಾಡಿದ ಎಲ್ಲರೂ ಅಭಿನಂದನಾರ್ಹರು ಎಂದ ಅವರು ವಿದ್ಯಾರ್ಥಿಗಳ ನಿರಂತರ ಸಹಕಾರ ಈ ಕಾರ್ಯಕ್ರಮಗಳಿಗೆ ಇರಬೇಕು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಬಹುಮಾನವನ್ನು ವಿತರಿಸಿ ಅವರ ಪ್ರಗತಿಗೆ ನಾವು ಸಹಕರಿಸುತ್ತಿದ್ಜೇವೆ. ಸತೀಶ್ ಶುಗರ್ಸ್ಸ ಆವಾರ್ಡ್ಸ ವೇದಿಕೆಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ತೋರಿಸಿದ್ದಾರೆ. ಮುಂದೆಯೂ ಸತೀಶ್ ಶುಗರ್ಸ್ಸ ಆವಾರ್ಡ್ಸ ವೇದಿಕೆಯನ್ನು ಸದುಪಯೋಗ ಪಡೆದುಕೊಂಡು ಗೋಕಾಕ ನಾಡಿನ ಕೀರ್ತಿಯನ್ನು ರಾಜ್ಯಾದ್ಯಂತ ಹರಡಿಸಬೇಕು ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ಕಬ್ಬಡ್ಡಿ ಮತ್ತು ಇತರ ಕ್ರೀಡಾ ಕಾರ್ಯಗಳಿಗೆ ಸಹಕಾರ ನೀಡಲಾಗುತ್ತಿದ್ದು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಪಯೋಗ ವಾಗುವ ನಿಟ್ಟಿನಲ್ಲಿ ಸುಮಾರು 65 ಸಾವಿರ ವಿದ್ಯಾರ್ಥಿಗಳಿಗೆ “ಗೆಲುವಿನ ನತ್ತ ನಮ್ಮ ಪಯಣ” ಎಂಬ ಪುಸ್ತಕಗಳನ್ನು ವಿತರಿಸಲಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ಹೊಸ ಶಾಲಾ ಕೋಠಡಿಗಳು ಮತ್ತು ಲೋಕೋಪಯೋಗಿ ಇಲಾಖೆಯಿಂದ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಪ್ರತಿದಿನ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸಾವಿರಾರು ಜನರು ತಂದೆ ಸತೀಶ ಜಾರಕಿಹೊಳಿ ಅವರ ಬಳಿ ಬರುತ್ತಾರೆ ಹೀಗೆ ಬಂದ ಬಹುತೇಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ದೋರಕಿಸಕೊಡುವ ಕಾರ್ಯವನ್ನು ತಂದೆ ಸತೀಶ್ ಜಾರಕಿಹೊಳಿ ಅವರು ಮಾಡುತ್ತಿದ್ದಾರೆ ಎಂದು ರಾಹುಲ್ ಜಾರಕಿಹೊಳಿ ಹೇಳಿದರು.
ಒಟ್ಟಿನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಸತೀಶ ಜಾರಕಿಹೊಳಿ ಪೌಂಡೇಶನ್ ಸದಾ ಕಾರ್ಯಪ್ರವೃತ್ತ ಇರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಮತ್ತು ರಾಹುಲ್ ಜಾರಕಿಹೊಳಿ ಅವರನ್ನು ಸತ್ಕರಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸತೀಶ್ ಶುರ್ಗಸ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ, ಡಿ.ಡಿ.ಪಿ.ಐ ಮೋಹನಕುಮಾರ ಹಂಚಾಟೆ, ತಹಶೀಲ್ದಾರ್ ಡಾ.ಮೋಹನ ಭಸ್ಮೆ, ಬಿಇಒಗಳಾದ ಜಿ.ಬಿ.ಬಳಗಾರ, ಅಜೀತ ಮನ್ನಿಕೇರಿ, ಮೋಹನ ದಂಡಿನ,ಎ.ಎನ್.ಪ್ಯಾಟಿ, ಶ್ರೀಮತಿ ಪ್ರಭಾವತಿ ಪಾಟೀಲ, ಶ್ರೀಮತಿ ರಾಜೇಶ್ವರಿ ಕುಡಚಿ, ಎಂ.ಆರ್.ಮುಂಜಿ, ಭಗವಂತ ಮೆಕಲಮರಡಿ, ಆರ್.ಟಿ.ಬಳಿಗಾರ, ಸಂಪನ್ಮೂಲ ವ್ಯಕ್ತಿ ಎಂ.ಬಿ.ಪಾಟೀಲ , ಬಿಸಿಯೂಟ ಅಧಿಕಾರಿ ಎ.ಬಿ.ಮಲಬನ್ನವರ, ರಿಯಾಜ ಚೌಗಲಾ, ಪ್ರಾಚಾರ್ಯ ಪ್ರಕಾಶ ಲಕ್ಕಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.