ಗೋಕಾಕ:ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಲಖನ್ ಜಾರಕಿಹೊಳಿ
ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಲಖನ್ ಜಾರಕಿಹೊಳಿ
ಗೋಕಾಕ ಮಾ 12 : ಸರಕಾರದ ಯೋಜನೆಗಳ ಸದುಪಯೋಗದಿಂದ ಜನತೆ ಆರ್ಥಿಕವಾಗಿ ಸಧೃಡರಾಗಿರೆಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹೇಳಿದರು.
ಮಂಗಳವಾರದಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸರಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ , ಶಕ್ತಿಯೋಜನೆ, ಯುವ ನಿಧಿ, ಗೃಹಜ್ಯೋತಿ ಯೋಜನೆಗಳು ಜನರಿಗೆ ಅತ್ಯಂತ ಉಪಯುಕ್ತವಾಗಿವೆ. ಅನುಭವ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಜನರ ಸಮಸ್ಯೆಗಳನ್ನು ಅರಿತು ಅವುಗಳಿಗೆ ಸ್ವಂದಿಸಲು ಈ ಯೋಜನೆಗಳನ್ನು ನೇರವಾಗಿ ನಿಮಗೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಗಳಿಂದ ಬರುವ ಹಣವನ್ನು ಒಳ್ಳೆಯ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕುಡಿಯುವ ನೀರು ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತಿದ್ದಾರೆ.ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಅಭಿವೃದ್ಧಿ ಪರ ಕಾರ್ಯನಿರ್ವಹಿಸುತ್ತಿರುವ ಶಾಸಕರುಗಳಿಗೆ ಹಾಗೂ ಸಚಿವರಿಗೆ ಜನತೆ ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ತಹಶೀಲ್ದಾರ ಡಾ.ಮೋಹನ ಭಸ್ಮೆ, ಅಧಿಕಾರಗಳಾದ ಸುಭಾಷ ವರಾಳೆ, ಡಿ.ಎಸ್.ಕೂಡ ಒಕ್ಕಲಿಗ , ಉದಯ ಕಾಂಬಳೆ, ಆರ್.ಪಿ.ಜಾಧವ ಸೇರಿದಂತೆ ಅನೇಕರು ಇದ್ದರು.