ಗೋಕಾಕ:ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಿ : ಜಿ.ಬಿ.ಬಳಗಾರ
ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಿ : ಜಿ.ಬಿ.ಬಳಗಾರ
ಗೋಕಾಕ ಮಾ 19 : ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು.
ಮಂಗಳವಾರದಂದು ನಗರದ ಜೆ.ಎಸ್.ಎಸ್.ಕಾಲೇಜಿನ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಮಾರ್ಚ 25 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರಿಗಾಗಿ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಎಲ್ಲರ ಕಣ್ಣು ಅಧಿಕಾರಿ ಮತ್ತು ಕೊಠಡಿ ಮೇಲ್ವಿಚಾರಕರ ಮೇಲಿರುತ್ತದೆ ಎಲ್ಲರೂ ಮೈಯಲ್ಲಾ ಕಣ್ಣಾಗಿಸಿಕೊಂಡು ಕಾರ್ಯನಿರ್ವಹಿಸಬೇಕು. ಪರೀಕ್ಷೆ ಪ್ರಾರಂಭದಿಂದ ಮುಗಿಯುವವರೆಗೆ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರ ಮೇಲೆ ಮೂರು ಜನ ಉನ್ನತ ಅಧಿಕಾರಿಗಳ ತಂಡವನ್ಪು ನಿಯೋಜಿಸಲಾಗಿರುತ್ತದೆ . ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಕಲ್ಗಾವಲು ಇದ್ದು, ನಕಲು ರಹಿತ ಪರೀಕ್ಷೆಯನ್ನು ನಡೆಯಲು ಇಲಾಖೆ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಇಲಾಖೆಯ ವ್ಯವಸ್ಥೆಯನ್ನು ಅನುಷ್ಠಾನಗೊಳ್ಳಲು ವಲಯದ ಎಲ್ಲಾ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಸಹಕರಿಸಬೇಕು ಎಂದ ಅವರು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ವಿತರಿಸುವಾಗ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮ , ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶ್ನೆ ಪತ್ರಿಕೆಗಳನ್ನು ವಿತರಣೆ ಯಾಗದಂತೆ ಕಾಳಜಿ ವಹಿಸಿ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ. ಆಕಸ್ಮಿಕವಾಗಿ ನಡೆದ ನಮ್ಮ ಸಣ್ಣ ತಪ್ಪುಗಳಿಂದ ಪರೀಕ್ಷಾರ್ಥಿಗಳು ಅನುಭವಿಸಬಹುದು ಆದ್ದರಿಂದ ಕೊಠಡಿ ಮೇಲ್ವಿಚಾರಕರು ಮತ್ತು ಅಧಿಕಾರಿಗಳು ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ನಗು ಮುಖದಿಂದ, ಸಿಹಿಯನ್ನು ಕೊಟ್ಟು ಪರೀಕ್ಷಾ ಕೊಠಡಿಗಳಲ್ಲಿ ಸ್ವಾಗತಿಸಿ ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಅಧಿಕಾರಿಗಳಿಗೆ ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಡಾ.ಮೋಹನ ಭಸ್ಮೆ , ಪಿಎಸ್ಐ ಕೆ.ವಾಲಿಕರ, ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ ಅಧಿಕಾರಿ ಬಿ.ಎಂ.ವಣ್ಣೂರ, ಆರ್.ಎಂ.ದೇಶಪಾಂಡೆ, ಜಿ.ಎನ್.ಸಾಂಗಲಿ ಉಪಸ್ಥಿತರಿದ್ದರು.