RNI NO. KARKAN/2006/27779|Sunday, September 8, 2024
You are here: Home » breaking news » ಗೋಕಾಕ:ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ:ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ 

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿದ
ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ ಜೂ 21 : ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಗುರುವಾರ ತಡರಾತ್ರಿ ನಡೆದ ಅಪಘಾತದಲ್ಲಿ ಗಾಯಗೊಂಡವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶುಕ್ರವಾರದಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ​ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ದೊನವಾಡ, ಬೆಳಕೂಡ,ಬೆಳವಿ ಗ್ರಾಮದ 10 ಜನರು ಕ್ರೂಜರ್ ವಾಹನದಲ್ಲಿ ದೊನವಾಡ ಗ್ರಾಮದದಿಂದ ಮುಧೋಳ ತಾಲೂಕಿನ ಕುಂದರಗಿ ಗ್ರಾಮದಲ್ಲಿರುವ ದೇವಸ್ಥಾನಕ್ಕೆ ತೆರಳುತ್ತಿರುವಾಗ ಕಂಕಣವಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಎಲ್ಲರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ನಾಗರಮುನ್ನೋಳಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶಂಕರಗೌಡ ಪಾಟೀಲ, ಬಾಳಪ್ಪ ಕರುಣಿ, ಶಿವು ಪಾಟೀಲ, ನಗರಸಭೆ ಸದಸ್ಯ ಭಗವಂತ ಹೂಳಿ, ಆರೀಪ ಪೀರಜಾದೆ ಉಪಸ್ಥಿತರಿದ್ದರು.

Related posts: