ಗೋಕಾಕ:ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳ ಮನವಿ ಸಲ್ಲಿಸಿದ ಗೋಕಾಕ ಸರಕಾರಿ ನೌಕರರು
ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳ ಮನವಿ ಸಲ್ಲಿಸಿದ ಗೋಕಾಕ ಸರಕಾರಿ ನೌಕರರು
ಗೋಕಾಕ ಜು 11 : ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು, ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು,
ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯರು ಗುರುವಾರದಂದು ನಗರದಲ್ಲಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಸರ್ಕಾರದ ಮುಂದಿರುವ ರಾಜ್ಯ ಸರ್ಕಾರಿ ನೌಕರರ ಮೇಲ್ಕಂಡ 3 ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ಈಗಾಗಲೇ ತುಂಬಾ ವಿಳಂಬವಾಗಿರುವುದರಿಂದ, ಶೀಘ್ರ ಸರ್ಕಾರಿ ಆದೇಶ ಹೊರಡಿಸಿ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಮುರಗೋಡ ರ ಕಾರ್ಯದರ್ಶಿ ಕೃಷ್ಣಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.