RNI NO. KARKAN/2006/27779|Thursday, November 21, 2024
You are here: Home » breaking news » ಗೋಕಾಕ:ಕೆಎಲ್ಇ ಸಂಸ್ಥೆ ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಹೆಮ್ಮರವಾಗಿ ಬೆಳೆದಿದೆ : ಜಯಾನಂದ ಮುನ್ನವಳ್ಳಿ

ಗೋಕಾಕ:ಕೆಎಲ್ಇ ಸಂಸ್ಥೆ ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಹೆಮ್ಮರವಾಗಿ ಬೆಳೆದಿದೆ : ಜಯಾನಂದ ಮುನ್ನವಳ್ಳಿ 

ಕೆಎಲ್ಇ ಸಂಸ್ಥೆ ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಹೆಮ್ಮರವಾಗಿ ಬೆಳೆದಿದೆ : ಜಯಾನಂದ ಮುನ್ನವಳ್ಳಿ

ಗೋಕಾಕ ಅ 1 : ಸಪ್ತರ್ಷಿಗಳು ಸ್ಥಾಪಿಸಿದ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಹೆಮ್ಮರವಾಗಿ ಬೆಳೆಯುತ್ತಾ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಹೊಂದಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ ಹೇಳಿದರು.

ಗುರುವಾರದಂದು ನಗರದ ಕೆಎಲ್ಇ ಸಿ.ಎಸ್.ಅಂಗಡಿ ಕಾಲೇಜು ಆವರಣದಲ್ಲಿ ಇಲ್ಲಿನ ಕೆಎಲ್ಇ ಸಮೂಹ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ 77ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ 5 ಕಿ.ಮಿ ಮ್ಯಾರಥಾನ್ ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕೆಎಲ್ಇ ಸಂಸ್ಥೆ 310 ಅಂಗ ಸಂಸ್ಥೆಗಳನ್ನು ಹೊಂದಿದ್ದು, ಕರ್ನಾಟಕ ,ಗೋವಾ, ಮಹಾರಾಷ್ಟ್ರ ರಾಜ್ಯಗಳ ಲಕ್ಷಾಂತರ ರೋಗಿಗಳನ್ನು ಗುಣಪಡಿಸಿದೆ. ರೋಬೋಟ್ ಸರ್ಜರಿ ಯಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. 300 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿಯಲ್ಲಿ ಸದ್ಯದಲ್ಲೇ ಪ್ರಾರಂಭಿಸಲಾಗುವುದು.
ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಮಾದರಿಯಾಗಿ ದೇಶ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಾ.ಕೋರೆಯವರ ನೇತೃತ್ವದಲ್ಲಿ ಸಂಸ್ಥೆ ಇನ್ನು ಹೆಚ್ಚಿನ ಪ್ರಗತಿ ಸಾಧಿಸಲೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಕೃತಿ ಉಳಿವು ಮತ್ತು ಶಾಂತಿ ಸುವ್ಯವಸ್ಥೆಯ ಅರಿವು ಧೇಯದೊಂದಿಗೆ ಹಮ್ಮಿಕೊಂಡ ಮ್ಯಾರಥಾನ್ ನಲ್ಲಿ ವಿಜೇತರಿಗೆ ಗಣ್ಯರಿಂದ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೂಪಾ ಮುನ್ನವಳ್ಳಿ, ವಿ‌.ಜೆ.ಮುನ್ನವಳ್ಳಿ, ಪ್ರೋ.ಸಿ.ಡಿ.ಅಕ್ಟಿ,ಬಿಇಒ ಜಿ.ಬಿ.ಬಳಗಾರ, ಸಿಪಿಐ ಶ್ರೀಶೈಲ ಬ್ಯಾಕೂಡ, ಆಡಳಿತಾಧಿಕಾರಿ ಜಿ.ಎಂ.ಅಂದಾನಿ, ಓಂಪ್ರಕಾಶ್ ಅಂಗಡಿ , ಅರಣ್ಯ ಇಲೋಖೆಯ ಎಸ್.ಎಸ್.ಕೋಳವಿ ಇದ್ದರು.

Related posts: