ಗೋಕಾಕ:ಹಲವಾರು ಮಹಿನೀಯರ ತ್ಯಾಗ ಬಲಿದಾನದ ದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. : ತಹಶೀಲ್ದಾರ್ ಡಾ.ಮೋಹನ ಭಸ್ಮೆ
ಹಲವಾರು ಮಹಿನೀಯರ ತ್ಯಾಗ ಬಲಿದಾನದ ದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. : ತಹಶೀಲ್ದಾರ್ ಡಾ.ಮೋಹನ ಭಸ್ಮೆ
ಗೋಕಾಕ ಅ 15 : ಹಲವಾರು ಮಹಿನೀಯರ ತ್ಯಾಗ ಬಲಿದಾನದ ದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ತಹಶೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು
ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
ನಮ್ಮ ಸ್ವಾತಂತ್ರ್ಯದೊಂದಿಗೆ ಪರಿಸರದ ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಸ್ವಾತಂತ್ರ್ಯವನ್ನು ಹೇಗೆ ಉಪಯೋಗಿಸಕೊಳ್ಳಬೇಕು ಎಂದು ಡಾ.ಬಾಬಾಸಾಬೇಬ ಅಂಬೇಡ್ಕರ್. ಸಂವಿಧಾನದ ಮೂಲಕ ಹೇಳಿಕೊಟ್ಟಿ ದ್ದಾರೆ.
ನಮ್ಮ ಸುತ್ತಲಿನ ಪರಿಸರವನ್ನು ಸಹ ನಾವು ವಿಷಮುಕ್ತವಾಗಿ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ಭಾರತ ಇಂದು ತಂತ್ರಜ್ಞಾನ ಸೇರಿದಂತೆ ಇತರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ದೇಶದ ಸುಸ್ಥಿರ ಅಭಿವೃದ್ಧಿಗೆ ದೇಶದ ಎಲ್ಲಾ ಪ್ರಜೆಗಳು ಕೈಜೋಡಿಸಬೇಕು ಎಂದು ಹೇಳಿದ ಅವರು
ಪ್ರವಾಹ ಸಂದರ್ಭದಲ್ಲಿ ನೆರೆ ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಿದವರಿಗೆ ಅಭಿನಂದನೆ ಸಲ್ಲಿಸಿದರು .
ಇದೇ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವತಿಯಿಂದ 10 ಜನ ಎಸ್.ಸಿ., ಎಸ್.ಟಿ ವಿದ್ಯಾರ್ಥಿಗಳಿಗೆ ತಲಾ 5 ಹಾಗೂ 3 ಸಾವಿರ ಸ್ಕಾಲರ್ಶಿಪ್ ವಿತರಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಡಿ.ವಾಯ.ಎಸ್.ಪಿ.ಡಿ.ಎಚ್.ಮುಲ್ಲಾ, ಸಿಪಿಐ ಗೋಪಾಲ ರಾಠೋಡ, ಅಶೋಕ್ ಪೂಜಾರಿ, ಬಿ.ಇ.ಓ ಜಿ.ಬಿ.ಬಳಗಾರ, ಪೌರಾಯುಕ್ತ ರಮೇಶ್ ಜಾಧವ, ಹಿರಿಯ ನ್ಯಾಯವಾದಿ ಬಿ.ಆರ.ಕೊಪ್ಪ, ಎಂ.ಎಲ್.ಜನ್ಮಟ್ಟಿ, ಎ.ಬಿ.ಮಲ್ಲಬನ್ನವರ, ಎಂ.ಎಂ.ನಧಾಫ್, ಎಂ.ಎಚ್.ಗಜಾಕೋಶ, ಡಾ.ಎಂ.ಎಸ್.ಕೊಪ್ಪದ, ಪಿಎಸ್ಐ ಕೆ.ವಾಲಿಕರ, ರಕ್ಷಣಾ ವೇದಿಕೆಯ ಬಸವರಾಜ ಖಾನಪ್ಪನವರ, ಕಿರಣ ಢಮಾಮಗರ, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.