RNI NO. KARKAN/2006/27779|Friday, November 8, 2024
You are here: Home » breaking news » ಗೋಕಾಕ:ವಿರೋಧ ಪಕ್ಷ ಆಡಳಿತ ವಿರುವ ಸರಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಂದುವರೆಸಿದೆ : ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ

ಗೋಕಾಕ:ವಿರೋಧ ಪಕ್ಷ ಆಡಳಿತ ವಿರುವ ಸರಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಂದುವರೆಸಿದೆ : ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ 

ವಿರೋಧ ಪಕ್ಷ ಆಡಳಿತ ವಿರುವ ಸರಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಂದುವರೆಸಿದೆ : ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ

ಗೋಕಾಕ ಅ 17 : ವಿರೋಧ ಪಕ್ಷದ ಆಡಳಿತವಿರುವ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಂದುವರೆಸಿದ್ದು, ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಕಗ್ಗೊಲೆಗೆ ಮುಂದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಫೇಸ್ಬುಕ್ ಪೇಜನಲ್ಲಿ ಬರೆದುಕೊಂಡಿರುವ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಕೇಂದ್ರದ ಅಣತಿಯಂತೆ ನಡೆದು, ನಿರಾಧಾರವಾದ #ಮುಡಾ ಆರೋಪಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ರಾಜಕೀಯ ಪ್ರೇರಿತವಾದ ರಾಜ್ಯಪಾಲರ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಇಂತಹ ಷಡ್ಯಂತ್ರ ವಿರುದ್ಧ ನಮ್ಮ ಸರ್ಕಾರವು ಸೂಕ್ತ ಕಾನೂನು ಹೋರಾಟ ನಡೆಸಲಿದ್ದು, ರಾಜಭವನವನ್ನು ರಾಜಕೀಯ ದ್ವೇಷದ ಕಾರಣಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿಗರು ಇದೀಗ ಕನ್ನಡಿಗರ ಹಾಗೂ ಅಹಿಂದ ವರ್ಗದ ಆಕ್ರೋಶವನ್ನು ಎದುರಿಸಲಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಸಚಿವ ಸತೀಶ ಜಾರಕಿಹೊಳಿ ಹಂಚಿಕೊಂಡಿದ್ದಾರೆ.

Related posts: