ಗೋಕಾಕ:ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಅವರ ಮೌಲ್ಯ ಮತ್ತು ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಮೋಹನ ಭಸ್ಮೆ
ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಅವರ ಮೌಲ್ಯ ಮತ್ತು ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಮೋಹನ ಭಸ್ಮೆ
ಗೋಕಾಕ ಅ 20 : ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಅವರ ಮೌಲ್ಯ ಮತ್ತು ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ತಹಶೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು.
ಮಂಗಳವಾರದಂದು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತ , ನಗರಸಭೆ , ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ದಿವಂಗತ ಡಿ ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಂದು ಕ್ಷಣ ಅತ್ಯಂತ ಮುಖ್ಯವಾಗಿದ್ದು, ಅದನ್ನು ಸದುಪಯೋಗ ಪಡೆದುಕೊಂಡು ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ನಾಡಿನ ಸಕಲ ಮಹಾನ ಪುರುಷರ ತತ್ವಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಅವರಂತೆ ಆಗಲು ಪ್ರಯತ್ನ ಶೀಲರಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಹಲವಾರು ಕಷ್ಟಗಳು ಬರುತ್ತವೆ ಅದನ್ನು ಮೆಟ್ಟಿ ನಿಂತು ಸಾಧಕರಿಗೆ ಸದೃಢ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅವರ ಜೀವನ ಚರಿತ್ರೆ ಕುರಿತು ಟಿ.ಬಿ.ಬಿಲ್ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ವಸತಿ ನಿಲಯದಲ್ಲಿ ಓದುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉದಯಕುಮಾರ್ ಕಾಂಬ್ಳೆ, ಪೌರಾಯುಕ್ತ ರಮೇಶ ಜಾಧವ್, ಶಿವಾನಂದ ಬಬಲಿ , ಫಕ್ಕಿರಪ್ಪ ಮೇಟಿ, ಎಸ್.ಪಿ.ವರಾಳೆ,ಡಿ.ಎಸ್. ಕುಡವಕ್ಕಲಿಗ, ಅಮೃತ ದಪ್ಪಿನವರ, ಬಿ.ಎ.ಮಾಲದಿನ್ನಿ , ಪಿ.ಆರ್.ಬೆವಿನಗಿಡದ , ಉಪಸ್ಥಿತರಿದ್ದರು