RNI NO. KARKAN/2006/27779|Sunday, October 20, 2024
You are here: Home » breaking news » ಬೆಳಗಾವಿ:ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆ : ಸಚಿವ ಜಾರಕಿಹೊಳಿಗೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳ ಸಿದ್ಧತೆ

ಬೆಳಗಾವಿ:ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆ : ಸಚಿವ ಜಾರಕಿಹೊಳಿಗೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳ ಸಿದ್ಧತೆ 

ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆ : ಸಚಿವ ಜಾರಕಿಹೊಳಿಗೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳ ಸಿದ್ಧತೆ

ಬೆಳಗಾವಿ ಅ 22: ನಾಳೇ ದಿನಾಂಕ 23 ರಿಂದ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅದ್ದೂರಿ ಕಿತ್ತೂರು ಉತ್ಸವ ನಡೆಯಲಿದ್ದು ಈ ಬಾರಿಯ ಕಿತ್ತೂರ ಉತ್ಸವಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ರೈತರ ಹೋರಾಟದ ಆತಂಕ ಎದುರಾಗಿದೆ

ನಿನ್ನೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ರೈತರ ಸಭೆಯಲ್ಲಿ ಕಿತ್ತೂರು ಉತ್ಸವ ಉದ್ಘಾಟನೆಗೆ ಅಡ್ಡಿ ಪಡಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಕಳೆದ 2013 ರಿಂದ ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸಿಲ್ಲ. ಅದರಲ್ಲೂ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಮಾಲಿಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬಿಲ್ ನೀಡಲು ಮೂರು ವರ್ಷದಿಂದ ಸತಾಯಿಸುತ್ತಿದ್ದಾರೆ. ಹೀಗಾಗಿ ರೈತರ ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಈ ಬಾ ರಿ ಕಿತ್ತೂರು ಉತ್ಸವ ಉದ್ಘಾಟನೆಗೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಉಳಿದ ಶಾಸಕರುಗಳಿಗೆ ಘೇರಾವ್‌ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಡಿಸಿ ಜಿಯಾವುಲ್ಲಾ ಈಗಾಗಲೇ ಸಕ್ಕರೆ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿದ್ದು, ರೈತರ ಬಾಕಿ ಬಿಲ್ ಪಾವತಿಸದಿದ್ದಲ್ಲಿ ಸೂಕ್ತ ಕ್ರಮ ಜರುಗಿಸುವುದಾಗಿ ರೈತರಿಗೆ ಭರವಸೆ ನೀಡಿದರು.

Related posts: