RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ನಮ್ಮ ಸುತ್ತ ಮುತ್ತಲಿನ ಕಾಡು, ವನ್ಯಜೀವಿಗಳ ಸಂರಕ್ಷಣೆ ನಮ್ಮ ಹೊಣೆಯಾಗಬೇಕು : ಅಮರನಾಥ ಜಾರಕಿಹೊಳಿ

ಗೋಕಾಕ:ನಮ್ಮ ಸುತ್ತ ಮುತ್ತಲಿನ ಕಾಡು, ವನ್ಯಜೀವಿಗಳ ಸಂರಕ್ಷಣೆ ನಮ್ಮ ಹೊಣೆಯಾಗಬೇಕು : ಅಮರನಾಥ ಜಾರಕಿಹೊಳಿ 

ನಮ್ಮ ಸುತ್ತ ಮುತ್ತಲಿನ ಕಾಡು, ವನ್ಯಜೀವಿಗಳ ಸಂರಕ್ಷಣೆ ನಮ್ಮ ಹೊಣೆಯಾಗಬೇಕು : ಅಮರನಾಥ ಜಾರಕಿಹೊಳಿ

 


ಗೋಕಾಕ ಅ 2 : ನಮ್ಮ ಸುತ್ತ ಮುತ್ತಲಿನ ಕಾಡು, ವನ್ಯಜೀವಿಗಳ ಸಂರಕ್ಷಣೆ ನಮ್ಮ ಹೊಣೆಯಾಗಬೇಕು ಎಂದು ಯುವ ನಾಯಕ ಅಮರನಾಥ ಜಾರಕಿಹೊಳಿ ಹೇಳಿದರು

70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಬುಧವಾರದಂದು ನಗರದಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಘಟಪ್ರಭಾ, ಗೋಕಾಕ ಪ್ರಾದೇಶಿಕ ಅರಣ್ಯ ವಲಯ, ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ “ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ” ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಸುತ್ತ ಮುತ್ತಲಿನ ಪರಿಸರ, ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಕೇಲವ ಸರ್ಕಾರ ಮತ್ತು ಅರಣ್ಯ ಇಲಾಖೆಯದ್ದು, ಎಂದು ಭಾವಿಸದೆ ಅದರ ಸಂರಕ್ಷಣೆಗೆ ನಾಗರಿಕರು ಮುಂದಾಗಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅರಣ್ಯ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ ಮಾತನಾಡಿ
ತಾಪಮಾನ, ಹವಾಮಾನ ವೈಪರೀತ್ಯದಂತಹ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ಮುಂದಿನ ಪೀಳಿಗೆ ಸಜ್ಜಾಗಬೇಕಿದೆ. ಹಾಗಾಗಿ ಪ್ರತಿಯೊಬ್ಬರೂ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಜವಾಬ್ದಾರಿ ತೋರಬೇಕಿದೆ., ನಮ್ಮ ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಪ್ರತಿಯೊಬ್ಬರಲ್ಲೂ ಪ್ರಜ್ಞೆ ಇರಬೇಕು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಂಕಲ್ಪ ತೊಟ್ಟು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಿಕವಾಡಿ ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಹಳ ಅಗತ್ಯವಾಗಿದ್ದು, ಜೀವ ಸಂಕುಲ ವ್ಯವಸ್ಥೆಯಲ್ಲಿ ವನ್ಯಜೀವಿಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಡೆಯುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ವನ್ಯಜೀವಿ ಸಪ್ತಾಹದ ಹಿನ್ನಲೆಯಲ್ಲಿ ವನ್ಯಜೀವಿ ಚಿತ್ರಕಲಾ, ಛಾಯಾಚಿತ್ರ ಸ್ಪರ್ಧೆ, ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಗೋಕಾಕ ವಲಯದ ವಿದ್ಯಾರ್ಥಿಗಳಿಗೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮಕ್ಕಳಿಗೆ ಹಮ್ಮಿಕೊಳ್ಳಲಾಗಿತ್ತು ಅದರಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ. ತಹಶೀಲ್ದಾರ ಡಾ.ಮೋಹನ ಭಸ್ಮೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ಬಿಇಒ ಜಿ.ಬಿ.ಬಳಗಾರ,ಸಹಾಯಕ ಅರಣ್ಯಸಂರಕ್ಷಣಾಧಿಕಾರಿಗಳಾದ ವಾಸಿಮ ತೆನಗಿ, ನಾಗರಾಜ್ ಬೀಮಗೋಳ, ಡಾ‌.ರವೀಂದ್ರ ಅಂಟಿನ, ವಲಯ ಅರಣ್ಯ ಅಧಿಕಾರಿ ಇಮ್ರಾನ್ ಮುಲ್ಲಾ, ರಾಕೇಶ್ ಅರ್ಜುನವಾಡ, ಉಮೇಶ್ ಪ್ರಧಾನಿ, ಜಗದೀಶ್ ರಕ್ಕಸಗಿ, ಶ್ರೀದೇವಿ ಕೊರಡ್ಡಿ,ಡಾ.ದಿನೇಶ್ ಕೌಶಿಕ್, ರೋಟರಿ ಸಂಸ್ಥೆಯ ಅಧ್ಯಕ್ಷ ಡಾ.ಸಿದ್ಧಣ ಕಮತ್, ಕಾರ್ಯದರ್ಶಿ ರಾಜಶೇಖರ ಮುನ್ನೋಳಿಮಠ,ಶಸೋಮಶೇಖರ್ ಮಗದುಮ್ಮ, ಶ್ರೀಮತಿ ಕಮತ, ಭಾಗ್ಯಶ್ರೀ ಮೋಸಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: