ಗೋಕಾಕ:ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ : ತಹಶೀಲ್ದಾರ್ ಡಾ.ಭಸ್ಮೆ
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ : ತಹಶೀಲ್ದಾರ್ ಡಾ.ಭಸ್ಮೆ
ಗೋಕಾಕ ಡಿ 6 : ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ತಹಶೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು.
ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಪಾಲ್ಗೋಳುವುದರಿಂದ ವಿದ್ಯಾರ್ಥಿಗಳು ಧೈಹಿಕ ಹಾಗೂ ಮಾನಸಿಕ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಸೋಲು ಗೆಲುವಿಗೆ ಮಹತ್ವ ನೀಡದೆ ಇಂತಹ ಕೂಟಗಳಲ್ಲಿ ಪಾಲ್ಗೊಂಡು ತಮ್ಮಲ್ಲಿಯ ಪ್ರತಿಭೆಗಳನ್ನು ಪ್ರದರ್ಶಿಸಿ ಪ್ರತಿಭಾವಂತರಾಗಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಡಾ.ವಿಶ್ವಾನಾಥ್ ಶಿಂಧೋಳಿಮಠ,ಸುಷ್ಮಾ ಪಾಟೀಲ, ಭಾಗಪ್ಪ ಉಳ್ಳಾಗಡ್ಡಿ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಮುಖ್ಯೋಪಾಧ್ಯಾಯನೀ ದಾಕ್ಷಾಯಿಣಿ ಮಠಪತಿ ಇದ್ದರು.