RNI NO. KARKAN/2006/27779|Wednesday, December 11, 2024
You are here: Home » breaking news » ಬೆಳಗಾವಿ:ಸಭಾಪತಿ ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂ.ಇ.ಎಸ್ ನಿಷೇಧದ ವಿಚಾರವೂ ಸೇರಲಿ: ಗುಡಗನಟ್ಟಿ ಗುಡುಗು

ಬೆಳಗಾವಿ:ಸಭಾಪತಿ ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂ.ಇ.ಎಸ್ ನಿಷೇಧದ ವಿಚಾರವೂ ಸೇರಲಿ: ಗುಡಗನಟ್ಟಿ ಗುಡುಗು 

ಸಭಾಪತಿ ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂ.ಇ.ಎಸ್ ನಿಷೇಧದ ವಿಚಾರವೂ ಸೇರಲಿ: ಗುಡಗನಟ್ಟಿ ಗುಡುಗು
ಬೆಳಗಾವಿ ಡಿ 8 : ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಕುರಿತು ಚರ್ಚೆಗೆ ಅವಕಾಶ ನೀಡುವದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಭರವಸೆ ನೀಡಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸಿದೆ.

ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು ಬಸವರಾಜ್ ಹೊರಟ್ಟಿ ಅವರಿಗೆ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಇರುವ ಕಳಕಳಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸವರಾಜ್ ಹೊರಟ್ಟಿ ಅವರು ಉತ್ತರ ಕರ್ನಾಟಕದ ರೈತ ಮುಖಂಡರನ್ನು,ಬುದ್ಧಿಜೀವಿ ಗಳನ್ನು,ವಿವಿಧ ಸಂಘಟನೆಗಳ ಮುಖಂಡರನ್ನು ಸಂಪರ್ಕಿಸಿ ಬೆಳಗಾವಿಯ ಅಧಿವೇಶನದಲ್ಲಿ ಯಾವ ಯಾವ ವಿಷಯಗಳ ಬಗ್ಗೆ ಚರ್ಚೆ ಆಗಬೇಕು ಎನ್ನುವದನ್ನು ಪಟ್ಟಿ ಮಾಡಿದ್ದು ಬಸವರಾಜ್ ಹೊರಟ್ಟಿ ಅವರು ಸಿದ್ಧಪಡಿಸಿರುವ ಪಟ್ಟಿಯಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ವಿಷಯವೂ ಸೇರಲಿ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮನವಿ ಮಾಡಿಕೊಂಡಿದ್ದಾರೆ.

Related posts: