ಗೋಕಾಕ:ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಗೋಕಾಕ ಅ 26: ಗೋಕಾಕ ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪಂಚಾಯ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕ, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ರಕ್ತದಾನ ಮಾಡಬೇಕು ಹಾಗೂ ದಾನಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಎನ್.ಎಸ್.ಎಸ್. ಕಾರ್ಯಾಕ್ರಮಾಧಿಕಾರಿ ಶಂಕರ ನಿಂಗನೂರ, ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.