ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಸಾಧಕರಾಗಬಹುದು : ಮಲ್ಲಿಕಾರ್ಜುನ ಕಲ್ಲೋಳ್ಳಿ
ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಸಾಧಕರಾಗಬಹುದು : ಮಲ್ಲಿಕಾರ್ಜುನ ಕಲ್ಲೋಳ್ಳಿ
ಗೋಕಾಕ ನ 2 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯವಂತರಾಗಿ ಸಾಧಕರಾಗಬಹುದೆಂದು ಇಲ್ಲಿಯ ರೋಟರಿ ರಕ್ತ ಭಂಡಾರದ ಚೇರಮನ್ ಮಲ್ಲಿಕಾರ್ಜುನ ಕಲ್ಲೋಳ್ಳಿ ಹೇಳಿದರು.
ಅವರು ಗುರುವಾರದಂದು ನಗರದ ಶೂನ್ಯ ಸಂಪಾದನಾ ಮಠದ ಶ್ರೀ ಚನ್ನ ಬಸವೇಶ್ವರ ವಿದ್ಯಾ ಪೀಠದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಹಾಗೂ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಕೆಯಲ್ಲಿ ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ವೃದ್ದಿಯಾಗುತ್ತದೆ. ಕ್ರೀಡಾಪಟುಗಳು ಸೋಲು ಗೆಲುವಿಗೆ ಮಹತ್ವ ನೀಡದೇ ಕ್ರೀಡಾಮನೋಭಾವದಿಂದ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪ್ರತಿಭಾನ್ವಿತರಾಗಿರೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಪ್ರಾಚಾರ್ಯ ನಾಗರಾಜ ಹಿರೇಮಠ, ಎಚ್‍ಒಡಿ ಸೀರಿನ್ ಮೋಮಿನ್,ನಾರಾಯಣ ಮಠಾಧಿಕಾರಿ ಹಾಗೂ ಶಿಕ್ಷಕರು ಸಿಬ್ಬಂದಿಯವರು ಇದ್ದರು.