ಖಾನಾಪುರ:ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
ಖಾನಾಪುರ ನ 6: ಪಟ್ಟಣದ ಜನನಿಬಿಡ ಮಾರುಕಟ್ಟೆ ಪ್ರದೇಶವನ್ನು ಭಾನುವಾರ ಸ್ಥಳೀಯ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯ 300ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಕಸಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.
ತರಬೇತಿ ಶಾಲೆಯ ಪ್ರಾಂಶುಪಾಲ ಎಂ.ಕುಮಾರ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ಟೇಶನ್ ರಸ್ತೆ, ಬಜಾರ ಪೇಟ್, ರವಿವಾರ ಪೇಟ ಮತ್ತಿತರ ಮಾರುಕಟ್ಟೆ ಪ್ರದೇಶವನ್ನು, ಸಂಪರ್ಕ ರಸ್ತೆಗಳು ಹಾಗೂ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಕುಮಾರ್, ಪ್ರತಿ ಭಾನುವಾರ ಅಥವಾ ರಜಾದಿನಗಳಂದು ಸಾರ್ವಜನಿಕ ಸ್ಥಳಗಳಿಗೆ ತೆರಳಲಿರುವ ಪ್ರಶಿಕ್ಷಣಾರ್ಥಿಗಳು ಶ್ರಮದಾನದ ಮೂಲಕ ಅವುಗಳನ್ನು ಸ್ವಚ್ಛಗೊಳಿಸಲಿದ್ದಾರೆ. ಈಗಾಗಲೇ ಸ್ಥಳೀಯ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ರಸ್ತೆ, ರೈಲು ನಿಲ್ದಾಣ, ವಿವಿಧ ಸರ್ಕಾರಿ ಕಚೇರಿಗಳು ಮತ್ತು ಆಸ್ಪತ್ರೆಗಳಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್.ಎಲ್ ಥಾವರೆಪ್ಪ, ರಿಯಾಜ್ ಮುನವಳ್ಳಿ, ಪಿ.ಎಸ್ ಪಾಟೀಲ, ಬಿ.ಎಸ್ ಕುಶಾಲ, ಎಸ್.ಕೆ ಭಜಂತ್ರಿ, ಆರ್.ಪಿ ಉಪಾಸೆ, ಬಿ.ವಿ ಮಳಿಮಠ, ಎಂ.ಕೆ ಗಣಾಚಾರಿ ಮತ್ತಿತರರು ಇದ್ದರು.