ಮೂಡಲಗಿ:ಗುಲಗಂಜಿಕೊಪ್ಪಕ್ಕೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗಿದೆ : ಶಾಸಕ ಬಾಲಚಂದ್ರ
ಗುಲಗಂಜಿಕೊಪ್ಪಕ್ಕೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗಿದೆ : ಶಾಸಕ ಬಾಲಚಂದ್ರ
ಮೂಡಲಗಿ ಜ 6 : ಗುಲಗಂಜಿಕೊಪ್ಪದ ಅಭಿವೃದ್ಧಿಗೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಿ ಸಾರ್ವಜನಿಕರಿಗೆ ಅರ್ಪಿಸಲಾಗಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸಮೀಪದ ಗುಲಗಂಜಿಕೊಪ್ಪ ಗ್ರಾಮದ ಈರಲಿಂಗೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಶುಕ್ರವಾರ ರಾತ್ರಿ ಜರುಗಿದ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗುಲಗಂಜಿಕೊಪ್ಪಕ್ಕೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗಿದೆ. ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲಾಗಿದೆ. ಎಸ್‍ಸಿಪಿ ಯೋಜನೆಯಡಿ ಕಾಂಕ್ರೀಟ ರಸ್ತೆಯನ್ನು ನಿರ್ಮಿಸಲಾಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ಸಾಂಸ್ಕಂತಿಕ ಭವನವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಸಂಸ್ಕಂತಿಯನ್ನು ಉಳಿಸಬೇಕಾಗಿದೆ. ಟಿವ್ಹಿ ಹಾಗೂ ಸಿನೇಮಾ ಹಾವಳಿಗಳ ಮಧ್ಯ ನಮ್ಮ ಇತಿಹಾಸ ಬಿಂಬಿಸುವ ಸಂಸ್ಕøತಿಗಳು ಮರೆಯಾಗುತ್ತಿವೆ. ಪಾಶ್ಚಾತ್ಯ ಸಂಸ್ಕಂತಿಗೆ ಒಳಗಾಗಿರುವ ನಮ್ಮ ಯುವ ಜನಾಂಗ ನಮ್ಮ ನಾಡಿನ ಸಂಸ್ಕಂತಿಯನ್ನು ಎತ್ತಿ ಹಿಡಿಯಬೇಕಾದ ಅಗತ್ಯವಿದೆ ಎಂದು ಹೇಳಿದರು. ಗುಲಗಂಜಿಕೊಪ್ಪ-ಯಾದವಾಡ ಮಧ್ಯದಲ್ಲಿರುವ ಹಳ್ಳಕ್ಕೆ ಸಿ.ಡಿ ನಿರ್ಮಾಣಕ್ಕೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆಯಿತ್ತರು. ಎರಡು ತಿಂಗಳೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ 13 ಲಕ್ಷ ರೂ. ವೆಚ್ಚದಡಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 9 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶಾಲಾ ಆವರಣ ಗೋಡೆಯನ್ನು ಉದ್ಘಾಟಿಸಿದರು. ತಾಪಂ ನಿಧಿಯ 7.50 ಲಕ್ಷ ರೂ. ವೆಚ್ಚದ ಕಾಂಕ್ರೀಟ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ, ತಾಪಂ ಸದಸ್ಯ ಸದಾಶಿವ ದುರಗನ್ನವರ, ಸಿಡಿಪಿಓ ವಾಯ್.ಎಂ. ಗುಜನಟ್ಟಿ, ರಂಗಣ್ಣಾ ಮಾಳಿ, ರಾಮಣ್ಣಾ ಆರೆನ್ನವರ, ಸಿದ್ದಪ್ಪ ಮಹಾಲಿಂಗಪೂರ, ಭೀಮಶಿ ನಾಡಗೌಡ, ಕಳ್ಳೆಪ್ಪ ಆರೆನ್ನವರ, ಪತ್ರೆಪ್ಪ ಎಮ್ಮಿ, ದೇವಪ್ಪ ಹುಂಡೇಕಾರ, ಬಸು ದುರಗನ್ನವರ, ಈಶ್ವರ ಮಠದ, ಹನಮಂತ ಅವರಿಬಳ್ಳಿ, ಯಲ್ಲಪ್ಪ ಹಾವನ್ನವರ, ಹನಮಂತ ಹೊಸಮನಿ, ಮುಂತಾದವರು ಉಪಸ್ಥಿತರಿದ್ದರು.