RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ : 28ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರದಲ್ಲಿ ಸಿಪಿಐ ತವನಪ್ಪಗೋಳ ಮನವಿ

ಗೋಕಾಕ:ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ : 28ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರದಲ್ಲಿ ಸಿಪಿಐ ತವನಪ್ಪಗೋಳ ಮನವಿ 

ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ : 28ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರದಲ್ಲಿ ಸಿಪಿಐ ತವನಪ್ಪಗೋಳ ಮನವಿ

ಗೋಕಾಕ ಜ 24: ಜನವರಿ 27 ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಿಪಿಐ ತವನಪ್ಪಗೋಳ ಮನವಿ ಮಾಡಿಕೊಂಡರು

ಅವರು ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ ಇಲಾಖೆ ಬೆಳಗಾವಿ ಅವರು ಹಮ್ಮಿಕೊಂಡಿದ್ದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ 2018 ಜನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು

ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದರಿಂದ ದಿನನಿತ್ಯ ಸಾಕಷ್ಟು ಅಪಘಾತಗಳು ಸಂಭವಿಸಿ ವಾಹನ ಸವಾರರು ಜೀವ ಕೈಳೆದುಕೊಳ್ಳುತ್ತಿದ್ದಾರೆ ಇದನ್ನು ಮನಗಂಡು ಅಪಘಾತ ಸಂಭವಿಸಿ ಜೀವ ಹಾನಿಯಾಗುವುದನ್ನು ತಪ್ಪಿಸಲು ಮಾನ್ಯ ಉಚ್ಚನ್ಯಾಯಾಲಯ ದೇಶಾದ್ಯಂತ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ ಇದು ಉಚ್ಚನ್ಯಾಯಾಲಯದ ಆದೇಶ ವಾಗಿರುವುದರಿಂದ ನಗರದ ಎಲ್ಲ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಕೊಂಡು ವಾಹನ ಚಲಾಯಿಸಿ ಅಪಘಾತಗಳನ್ನು ತಪ್ಪಿಸಲು ಸಹಕರಿಸಬೇಕೆಂದು ಮನವಿ ಮಾಡಿದರು

ಉತ್ತರ ವಲಯದ ಐಜಿಪಿ ಅಲೋಕ್ ಕುಮಾರ್ ಅವರ ಆದೇಶದಂತೆ ಜಿಲ್ಲೆಯಾದ್ಯಂತ ಇದರ ಬಗ್ಗೆ ಪೊಲೀಸ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಲ್ಲರೂ ಈ ಅಭಿಯಾನಕ್ಕೆ ಕೈ ಜೋಡಿಸಿ ಕಾನೂನು ಪಾಲಿಸಬೇಕೆಂದು ಸಿಪಿಐ ಹೇಳಿದರು
ಕಾರ್ಯಕ್ರಮವನ್ನು ನಗರ ಠಾಣೆಯ ಪಿಎಸ್ಐ ಜಾನರ ನಿರೂಪಿಸಿ ವಂದಿಸಿದರು

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರಾದ ಬಸವರಾಜ ಖಾನಪ್ಪನವರ ,ಕಿರಣ ಢಮಾಮಗರ , ರೋಟರಿ ಸಂಸ್ಥೆಯ ಸೋಮಶೇಖರ್ ಮಗದುಮ್ಮ , ಸೇರಿದಂತೆ ಇತರರು ಉಪಸ್ಥಿತರಿದ್ದರು

Related posts: