RNI NO. KARKAN/2006/27779|Monday, January 6, 2025
You are here: Home » breaking news » ಘಟಪ್ರಭಾ:ಮತದಾರರ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ತರದೇ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೆನೆ : ಶಾಸಕ ಬಾಲಚಂದ್ರ

ಘಟಪ್ರಭಾ:ಮತದಾರರ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ತರದೇ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೆನೆ : ಶಾಸಕ ಬಾಲಚಂದ್ರ 

ದುರದುಂಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅರಭಾವಿ ದುರದುಂಡೇಶ್ವರ ಮಠದ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳು ಉಪಸ್ಥಿತರಿದ್ದರು.

ಮತದಾರರ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ತರದೇ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೆನೆ : ಶಾಸಕ ಬಾಲಚಂದ್ರ

ಘಟಪ್ರಭಾ ಮಾ 10 : ಅರಭಾವಿ ಮತಕ್ಷೇತ್ರದ ಬಾಂಧವರು ಯಾವುದೇ ಜಾತಿ, ಮತ ನೋಡದೇ ತಮ್ಮ ಮನೆಯ ಮಗನಂತೆ ಆಶೀರ್ವದಿಸುತ್ತಿದ್ದೀರಿ. ಈ ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ತರದೇ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇಲ್ಲಿಗೆ ಸಮೀಪದ ದುರದುಂಡಿ ಗ್ರಾಮ ಪಂಚಾಯತಿಯಿಂದ ಶುಕ್ರವಾರ ರಾತ್ರಿ ಜರುಗಿದ ವಿವಿಧ ಕಾಮಗಾರಿಗಳು ಹಾಗೂ ಭಗೀರಥ ಮೂರ್ತಿ ದಶಮಾನೋತ್ಸವ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.
ಅರಭಾವಿ ಕ್ಷೇತ್ರದ ಜನರು ಹೃದಯವಂತರು. ಎಲ್ಲರನ್ನು ಗೌರವಿಸುವವರು. ಇಂತವರು ಸಿಕ್ಕಿರುವುದು ನನ್ನ ಭಾಗ್ಯವೇ ಸರಿ. ಇವರುಗಳ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುವ ಮೂಲಕ ಅರಭಾವಿ ಕ್ಷೇತ್ರವನ್ನು ಏಳ್ಗೆ ಮಾಡುತ್ತೇನೆಂದು ಹೇಳಿದರು.
ಅಭಿವೃದ್ಧಿಯಲ್ಲಿ ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಅಭ್ಯುದಯಕ್ಕೆ ಶ್ರಮಿಸುತ್ತ ಬರುತ್ತಿದ್ದೇನೆ. ಸಹೋದರತ್ವ ಭಾವನೆಯಿಂದ ಸರ್ವ ಧರ್ಮಿಯರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಅಭಿವೃದ್ಧಿ ವಿಷಯಕ್ಕೆ ಬಂದರೆ ಕಳೆದ 14 ವರ್ಷಗಳ ಅವಧಿಯು ಕ್ಷೇತ್ರದ ನಂದನವನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ದುರದುಂಡೇಶ್ವರ ಮಠದ ಅಜ್ಜನವರ ಕೃಪೆಯಿಂದ ಪಾವನವಾಗಿರುವ ಅರಭಾವಿ ನೆಲಕ್ಕೆ ತನ್ನದೇಯಾದ ಹಿನ್ನೆಲೆ ಹಾಗೂ ಇತಿಹಾಸವಿದೆ. ಕ್ಷೇತ್ರದ ಸರ್ವತೋಮುಖ ಏಳ್ಗೆಗಾಗಿ 5ನೇ ಬಾರಿಗೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಜನಸೇವೆಗಾಗಿ ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ವಿನಂತಿಸಿಕೊಂಡರು.
ದುರದುಂಡಿ ಗ್ರಾಮಸ್ಥರಿಗೆ ಸರ್ಕಾರದ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗಿದೆ. ದುರದುಂಡಿಯಿಂದ ದಂಡಾಪೂರವರೆಗಿನ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ರೈತರ ಹೊಲದ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ 16.25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ 13 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು. 27 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅರಭಾವಿ ಮಠದ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳು ವಹಿಸಿದ್ದರು. ಸಾನಿಧ್ಯವನ್ನು ಉಪ್ಪಾರಹಟ್ಟಿಯ ನಾಗೇಶ್ವರ ಸ್ವಾಮೀಜಿ ವಹಿಸಿದ್ದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಭೀಮಶಿ ಹುಕ್ಕೇರಿ ವಹಿಸಿದ್ದರು.
ಹಿರಿಯ ಸಹಕಾರಿ ಮುಖಂಡ ಬಸಗೌಡ ಪಾಟೀಲ, ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಹಿಡಕಲ್ ಡ್ಯಾಂ ಘಯೋನೀಬಮ ಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಯ್ಯಪ್ಪ ಬಡ್ನಿಂಗಗೋಳ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಬೆಳಗಾವಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಹೊನ್ನಜ್ಜ ಕೋಳಿ, ರಾಮಣ್ಣಾ ಬಂಡಿ, ಡಾ.ಶಂಕರ ಗೋರಖನಾಥ, ಮಹಾದೇವ ತಾಂಬಡಿ, ಶಿವಮೂರ್ತಿ ಹುಕ್ಕೇರಿ, ನಿಂಗಪ್ಪ ಮಾಳ್ಯಾಗೋಳ, ಭೀಮಶಿ ಅಂತರಗಟ್ಟಿ, ಬಸವಂತ ಕಮತಿ, ಮುತ್ತೆಪ್ಪ ಕುಳ್ಳೂರ, ಪಿಕೆಪಿಎಸ್ ಅಧ್ಯಕ್ಷ ದೇವೇಂದ್ರ ಅರಭಾವಿ, ಶಿವಲಿಂಗ ಪೂಜೇರಿ, ಲಕ್ಷ್ಮಣ ಗಣಪ್ಪಗೋಳ, ಕೃಷ್ಣಪ್ಪ ಬಂಡ್ರೊಳ್ಳಿ, ಆರ್.ಕೆ. ಮಹಾರಡ್ಡಿ, ಶಂಕರ ಬಿಲಕುಂದಿ, ವಿಠ್ಠಲ ಸವದತ್ತಿ, ಸುಧೀರ ಜೋಡಟ್ಟಿ, ಸಿಡಿಪಿಓ ವಾಯ್.ಎಂ. ಗುಜನಟ್ಟಿ, ಪಿಡಿಓ ಆರ್.ಎನ್.ಗುಜನಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ದುರದುಂಡಿಯಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದುರದುಂಡಿ ಗ್ರಾಮಸ್ಥರು ವಿವಿಧ ವಾಧ್ಯವೃಂದಗಳೊಂದಿಗೆ ತೆರೆದ ವಾಹನದಲ್ಲಿ ಅದ್ಧೂರಿಯಾಗಿ ಬರಮಾಡಿಕೊಂಡರು. ನಂತರ ಗ್ರಾಮಸ್ಥರು ಅದ್ಧೂರಿಯಾಗಿ ಸತ್ಕರಿಸಿ ನೆನಪಿನ ಕಾಣಿಕೆ ಅರ್ಪಿಸಿದರು.

Related posts: