RNI NO. KARKAN/2006/27779|Friday, November 22, 2024
You are here: Home » breaking news » ಮೂಡಲಗಿ:ಭಾರತ ವಿವಿಧತೆಯಲ್ಲಿ ಏಕತೆಯನ್ನು ಮೆರೆಯುತ್ತಿರುವ ಜಗತ್ತಿನ ಏಕೈಕ ರಾಷ್ಟ್ರವಾಗಿದೆ : ಶಾಸಕ ಬಾಲಚಂದ್ರ

ಮೂಡಲಗಿ:ಭಾರತ ವಿವಿಧತೆಯಲ್ಲಿ ಏಕತೆಯನ್ನು ಮೆರೆಯುತ್ತಿರುವ ಜಗತ್ತಿನ ಏಕೈಕ ರಾಷ್ಟ್ರವಾಗಿದೆ : ಶಾಸಕ ಬಾಲಚಂದ್ರ 

ಕುಲಗೋಡದಲ್ಲಿ ನಡೆದ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು.

ಭಾರತ ವಿವಿಧತೆಯಲ್ಲಿ ಏಕತೆಯನ್ನು ಮೆರೆಯುತ್ತಿರುವ ಜಗತ್ತಿನ ಏಕೈಕ ರಾಷ್ಟ್ರವಾಗಿದೆ : ಶಾಸಕ ಬಾಲಚಂದ್ರ
ಮೂಡಲಗಿ ಮಾ 11 : ದೇವನೊಬ್ಬ ನಾಮ ಹಲವು ಎಂಬಂತೆ ಎಲ್ಲ ಧರ್ಮಿಯರು ಪೂಜಿಸುವುದು ದೇವರನ್ನು. ಆದರೆ ಅವರವರ ಧರ್ಮಗಳ ಆಚರಣೆಯಲ್ಲಿ ಮಾತ್ರ ವ್ಯತ್ಯಾಸವನ್ನು ಕಾಣಬಹುದಾಗಿದೆ. ಜಗಕ್ಕೆ ದೇವನೊಬ್ಬನೇ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶನಿವಾರ ರಾತ್ರಿ ಜರುಗಿದ ಸಾಯಿಬಾಬಾ ಜಾತ್ರೆ ಹಾಗೂ ಸಾಯಿ ಮಂದಿರದ 3ನೇಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಭಾರತ ವಿವಿಧತೆಯಲ್ಲಿ ಏಕತೆಯನ್ನು ಮೆರೆಯುತ್ತಿರುವ ಜಗತ್ತಿನ ಏಕೈಕ ರಾಷ್ಟ್ರವಾಗಿದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಿಂದ ಕುಲಗೋಡ ಭಾಗದಲ್ಲಿ ಸಾಯಿಬಾಬಾ ಮಂದಿರವು ಭಕ್ತಾಧಿಗಳಿಗೆ ಧಾರ್ಮಿಕ ಮನೋಭಾವನೆಯನ್ನು ಉಣಬಡಿಸುತ್ತಿದೆ. ಈ ಕಾರ್ಯಕ್ರಮದ ರೂವಾರಿ ರಾಜು ಯಡಹಳ್ಳಿ ಅವರ ಕುಟುಂಬ ವರ್ಗದ ಧಾರ್ಮಿಕತೆಯ ಕಾರ್ಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು.
ಈ ಮೊದಲು ಮಕ್ಕಳ ಮನರಂಜನೆ ಕಾರ್ಯಕ್ರಮಗಳನ್ನು ಕೇವಲ ಟಿವ್ಹಿ ನೋಡಿ ಆನಂದಿಸುತ್ತಿದ್ದೇವು. ಆದರೆ ಅಂತಹ ಕಾರ್ಯಕ್ರಮಗಳಿಂದು ಗ್ರಾಮೀಣ ಪ್ರದೇಶದಲ್ಲಿಯೂ ವ್ಯಾಪಿಸಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇಂತಹ ಪ್ರತಿಭೆಗಳನ್ನು ನಾವೆಲ್ಲರೂ ಬೆಳೆಸಿ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸಂಘಟಿಕ ರಾಜು ಯಡಹಳ್ಳಿ ಅವರು ಸತ್ಕರಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ತಾಪಂ ಮಾಜಿ ಸದಸ್ಯ ಸುಭಾಸ ಒಂಟಗೋಡಿ, ಮೂಡಲಗಿಯ ಎನ್.ಟಿ. ಫಿರೋಜಿ, ಸಂತೋಷ ಸೋನವಾಲ್ಕರ, ಜಯಾನಂದ ಪಾಟೀಲ, ರಾಮಣ್ಣಾ ಕುರುಬಚನ್ನಾಳ, ಭೀಮಶಿ ಸೋಮಕ್ಕನವರ, ಮುಂತಾದವರು ಉಪಸ್ಥಿತರಿದ್ದರು

Related posts: