ಗೋಕಾಕ:ರಾಜ್ಯ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಅಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ

ರಾಜ್ಯ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಅಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ
ಗೋಕಾಕ ಮಾ 20 : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕಾರ್ಖಾನೆಗಳ ಮಹಾಮಂಡಳ ಆಡಳಿತ ಮಂಡಳಿಯ ಕಚೇರಿಯಲ್ಲಿ ಮಂಗಳವಾರದಂದು ಜರುಗಿದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಶೋಕ ಪಾಟೀಲ ಅವರೊಬ್ಬರೇ ಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದ ಈ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು.
ಮುಂದಿನ 30 ತಿಂಗಳ ಅವಧಿವರೆಗೆ ಅಶೋಕ ಪಾಟೀಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಬೆಂಗಳೂರ ಗ್ರಾಮಾಂತರ ಸಹಾಯಕ ಉಪನಿಬಂಧಕ ಬಿ.ಜಯಪ್ರಕಾಶ ಅವರು ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಪಾಟೀಲ ಅವರು, ಮಹಾಮಂಡಳದ ಸರ್ವಾಂಗಿಣ ಅಭಿವೃದ್ಧಿಗೆ ಎಲ್ಲ ಕಾರ್ಖಾನೆಗಳ ಆಡಳಿತ ಮಂಡಳಿಯ, ಹಿರಿಯ ಸಹಕಾರಿಗಳ ಮಾರ್ಗದರ್ಶನದಲ್ಲಿ ದುಡಿಯುವದಾಗಿ ಹೇಳಿದರು. ಅಧ್ಯಕ್ಷರಾಗಲು ಶ್ರಮಿಸಿರುವ ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವರು ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ,ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ಆಡಳಿತ ಮಂಡಳಿ ಸದಸ್ಯರನ್ನು ಅಭಿನಂದಿಸಿದ್ದಾರೆ.