ಗೋಕಾಕ:ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಮದ್ಯಪಾನ ನಿಷೇಧವನ್ನು ಸೇರಿಸದಿರುವುದು ವಿಷಾಧಿನಿಯ: ಮಗದುಮ್ಮ
ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಾರ್ಯಾಲಯದಲ್ಲಿ ಮದ್ಯಪಾನ ನಿಷೇಧದ ಕುರಿತು ಮತದಾರರಿಗೆ ಜಾಗೃತಿ ಮೂಡಿಸುವ ಕರಪತ್ರಗಳನ್ನು ಗಣ್ಯರು ಬಿಡುಗಡೆಗೊಳಿಸುತ್ತಿರುವುದು.
ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಮದ್ಯಪಾನ ನಿಷೇಧವನ್ನು ಸೇರಿಸದಿರುವುದು ವಿಷಾಧಿನಿಯ: ಮಗದುಮ್ಮ
ಗೋಕಾಕ ಎ 8 : ಬರುವ ವಿಧಾನ ಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮದ್ಯಪಾನ ನಿಷೇಧವನ್ನು ಸೇರಿಸದಿರುವುದು ವಿಷಾಧಿನಿಯವೆಂದು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಸೋಮಶೇಖರ ಮಗದುಮ್ಮ ಹೇಳಿದರು.
ರವಿವಾರದಂದು ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಾರ್ಯಾಲಯದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ ದುಶ್ಚಟ ಮುಕ್ತ ಸಮಾಜ ನಿರ್ಮಿಸುವಂತಹ ವ್ಯಕ್ತಿಗಳಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವಂತೆ ಜಾಗೃತಿ ಮೂಡಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ನಾಗಲಿಂಗ ಪೋತದಾರ, ಸದಸ್ಯ ಚಿನ್ನಯ್ಯ ಹಿರೇಮಠ, ಯೋಜನಾಧಿಕಾರಿ ಸುರೇಂದ್ರಕುಮಾರ ಸೇರಿದಂತೆ ಅನೇಕರು ಇದ್ದರು.