ಗೋಕಾಕ:ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಒತ್ತಾಯ
ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಒತ್ತಾಯ
ಗೋಕಾಕ ಎ 10 : ಬೇಸಿಗೆಯ ಅರ್ಭಟಕ್ಕೆ ತುತ್ತಾಗಿರುವ ಸಾರ್ವಜನಿಕರಿಗೆ ಕುಡಿಯುವ ನೀರಿನ ಅನುಕೂಲಕ್ಕೋಸ್ಕರ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದ್ದಾರೆ.
ಮಂಗಳವಾರ ಸಂಜೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇಸಿಗೆಯಲ್ಲಿ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ತುಂಬ ಸಮಸ್ಯೆಯಾಗಿದೆ. ಆದ್ದರಿಂದ ಹಿಡಕಲ್ ಜಲಾಶಯದಿಂದ ಎರಡೂ ಕಾಲುವೆಗಳಿಗೆ ಎಪ್ರೀಲ್ 15 ರಿಂದ 10 ದಿನಗಳವರೆಗೆ ನೀರನ್ನು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಿರುವ ಅವರು, ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಇದೊಂದೇ ಪರಿಹಾರವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
Related posts:
ಹುದಲಿ : ರಾಜಕೀಯ ಜೀವನದಲ್ಲಿ ಯಾರಿಗೂ ನಾನು ಸುಲಭವಾಗಿ ಸೋಲು ಒಪ್ಪಿಕೊಂಡಿಲ್ಲ: ಹುದಲಿಯಲ್ಲಿ ಮಾಜಿ ಸಚಿವ ಸತೀಶ ಖಡಕ್ ಮಾತ…
ಗೋಕಾಕ:ಮುರುಘರಾಜೇಂದ್ರ ಶ್ರೀಗಳು ಗೋಕಾಕ ಭಾಗದ ನೈತಿಕ ಶಕ್ತಿಯಾಗಿ ಹೊರಹೊಮ್ಮಿದ್ದಾರೆ : “ಮಾತೃ ಹೃದಯಿ” ಗ್ರಂಥ ಬಿಡುಗಡೆ …
ಮೂಡಲಗಿ : ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ 78.39 ಲಕ್ಷ ರೂಪಾಯಿ-ಶಾಸಕ ಬಾಲಚಂದ್ರ ಜಾರಕಿಹೊಳಿ