RNI NO. KARKAN/2006/27779|Monday, September 16, 2024
You are here: Home » breaking news » ಗೋಕಾಕ:ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಿ : ಬಿಜೆಪಿ ಕಾರ್ಯಕಾರಣಿಯಲ್ಲಿ ಗುರುಪಾದ ಕಳ್ಳಿ ಕರೆ

ಗೋಕಾಕ:ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಿ : ಬಿಜೆಪಿ ಕಾರ್ಯಕಾರಣಿಯಲ್ಲಿ ಗುರುಪಾದ ಕಳ್ಳಿ ಕರೆ 

ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಿ : ಬಿಜೆಪಿ ಕಾರ್ಯಕಾರಣಿಯಲ್ಲಿ ಗುರುಪಾದ ಕಳ್ಳಿ ಕರೆ

 

ಗೋಕಾಕ : 2018 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಶಕ್ತಿಮೀರಿ ಪ್ರಯತ್ನಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ ತಿಳಿಸಿದರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅರಭಾವಿ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ 150+ ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಈಗಿನಿಂದಲೇ ಕಾರ್ಯಕರ್ತರು ಸನ್ನದ್ಧರಾಗಬೇಕು. ಪ್ರತಿ ಮತಗಟ್ಟೆ ಹಂತದಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗಿ ಮತಯಾಚಿಸುವಂತೆ ಕೋರಿದರು. ಬಿಜೆಪಿಗೆ ಹೊಸದಾಗಿ ಸೇರ್ಪಡೆಯಾಗುವವರು 1800 266 1001 ಈ ನಂಬರಗೆ ಮಿಸ್ಡ್ ಕಾಲ್ ಮಾಡಿ ಪಕ್ಷದ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕಾರಣಿಯಲ್ಲಿ ಪಾಲ್ಗೊಂಡಿರು ಕಾರ್ಯಕರ್ತರು

ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ವಹಿಸಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ, ಕಾರ್ಯದರ್ಶಿ ಸಂಜಯ ಗಿರೆಪ್ಪಗೌಡರ, ಮುಖಂಡರಾದ ಅಶೋಕ ನಾಯಿಕ, ಬಿ.ಡಿ. ಪಾಟೀಲ, ಬಸವಂತ ಕಮತಿ, ಅಶೋಕ ಪರುಶೆಟ್ಟಿ, ಎಸ್.ಆರ್.ಭೋವಿ, ಕೆಂಚಗೌಡ ಪಾಟೀಲ, ವಿಠ್ಠಲ ಸವದತ್ತಿ, ಶಂಕರ ಬಿಲಕುಂದಿ, ಪರಮೇಶ್ವರ ಹೊಸಮನಿ, ಪದ್ಮಾವತಿ ದೇವುಗೋಳ, ಸುಭಾಸ ಕುರಬೇಟ, ರಾಮಣ್ಣಾ ಮಹಾರಡ್ಡಿ, ಶಿವನಗೌಡ ಪಾಟೀಲ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ರಾಮಣ್ಣಾ ಬಂಡಿ, ಸುನೀಲ ಜಮಖಂಡಿ, ರಾಜೇಸಾಬ ಬಳಿಗಾರ, ಮುಂತಾದವರು ಉಪಸ್ಥಿತದ್ದರು.
ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಮಾದರ ಮಾತನಾಡಿ, ಅರಭಾವಿ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಶ್ರಮಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವಿನ ಅಂತರವನ್ನು ಹೆಚ್ಚಿಸಿ ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸಲಿಕ್ಕೆ ಕಾರ್ಯಕರ್ತರು ಶ್ರಮಿಸುವಂತೆ ಕೋರಿದರು.
ಆರಂಭದಲ್ಲಿ ಬಿಜೆಪಿ ಸಂಸ್ಥಾಪಕರ ಭಾವಚಿತ್ರಗಳಿಗೆ ಮುಖಂಡರು ಪೂಜೆ ಸಲ್ಲಿಸಿದರು. ರೇವಣ್ಣ ಕಣಕಿಕೋಡಿ ಕಾರ್ಯಕ್ರಮ ನಿರೂಪಿಸಿದರು.
ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಪಂ, ತಾಪಂ ಸದಸ್ಯರುಗಳು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಸಹಕಾರಿಗಳು ಉಪಸ್ಥಿತರಿದ್ದರು

Related posts: