RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಪರ ಬಿರುಸಿನ ಪ್ರಚಾರ

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಪರ ಬಿರುಸಿನ ಪ್ರಚಾರ 

ಗ್ರಾಮದ ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಲಕ್ಕಪ್ಪ ಚಂದರಗಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗ್ರಾಮದ ಹಲವಡೆ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಪರ ಬಿರುಸಿನ ಪ್ರಚಾರ

ಬೆಟಗೇರಿ ಮೇ 3 : ಅರಭಾಂವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಈ ಭಾರಿ ಚುನಾವಣೆಯಲ್ಲಿ ಬಹುಮತಗಳ ಅಂತರದಿಂದ ಗೆಲ್ಲಿಸಲು ಪಣತೊಟ್ಟ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಬಿಜೆಪಿ ಮುಖಂಡರು, ಕಾರ್ಯಕರ್ತರು ಗ್ರಾಮದ ಹಲವಡೆ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.
ಅರಭಾಂವಿ ವಿಧಾನ ಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರ ಪರ ಗುರುವಾರ ಮೇ.3 ರಂದು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿಧಡೆ ಮನೆ ಮನೆಗೆ ತೆರಳಿ ಮತಯಾಚಿಸಿ ಸ್ಥಳೀಯ ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಲಕ್ಕಪ್ಪ ಚಂದರಗಿ ಮಾತನಾಡಿ, ಮತಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ನಾಗರಿಕರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಶಾಸಕ ಬಾಲಚಂದ್ರ ಅವರಿಗೆ ಮತದಾರರು ಮತ ನೀಡಿ ಬಹುಮತದಿಂದ ಆರಿಸಿ ತರಬೇಕೆಂದು ಮನವಿ ಮಾಡಿಕೊಂಡರು.
ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೇಸ್ ಸರ್ಕಾರವನ್ನು ಕಿತ್ತೆಸೆದು ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಮತದಾರರು ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಬೇಕೆಂದು ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಲಕ್ಕಪ್ಪ ಚಂದರಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾಪಂ ಸದಸ್ಯ ಈಶ್ವರ ಬಳಿಗಾರ, ಸುಭಾಷ ಕರೆಣ್ಣವರ, ಸತ್ತೆಪ್ಪ ಮಾಳೇದ, ಮಲ್ಲಪ್ಪ ಪಣದಿ, ಹನುಮಂತ ವಡೇರ, ಬಸವರಾಜ ಕುರಬೇಟ, ರಾಮಣ್ಣ ನೀಲಣ್ಣವರ, ಶಿವಪ್ಪ ದೇಯಣ್ಣವರ, ಸುಭಾಷ ಜಂಬಗಿ, ಲಖನ್ ಚಂದರಗಿ, ರಮೇಶ ಬಾಣಸಿ, ಲಕ್ಷ್ಮಣ ವಿ. ಚಂದರಗಿ, ಬಸವರಾಜ ಮಾಳೇದ, ಮಹಾದೇವ ದೇಯಣ್ಣವರ, ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts: