RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಅಭಿವೃದ್ಧಿಗೆ ಸಂದ ಜಯ : ಶಾಸಕ ಬಾಲಚಂದ್ರ

ಗೋಕಾಕ:ಅಭಿವೃದ್ಧಿಗೆ ಸಂದ ಜಯ : ಶಾಸಕ ಬಾಲಚಂದ್ರ 

ಅಭಿವೃದ್ಧಿಗೆ ಸಂದ ಜಯ : ಶಾಸಕ ಬಾಲಚಂದ್ರ

ಗೋಕಾಕ ಮೇ 15 : ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಭರ್ಜರಿ ಜಯ ಗಳಿಸಿದ್ದಾರೆ.
ಸತತ ಐದನೇ ಬಾರಿಗೆ ಸ್ಪರ್ಧಿಸಿದ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‍ನ ಭೀಮಪ್ಪ ಗುಂಡಪ್ಪ ಗಡಾದ ಅವರನ್ನು 47328 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಈ ಗೆಲುವಿನೊಂದಿಗೆ ಬಾಲಚಂದ್ರ ಜಾರಕಿಹೊಳಿ ಅವರು ಐದನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದಂತಾಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೇಸ್‍ನಿಂದ ಸ್ಪರ್ಧಿಸಿದ್ದ ಮಾಜಿ ಕೆಎಎಸ್ ಅಧಿಕಾರಿ ಅರವಿಂದ ದಳವಾಯಿ ಅವರು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಒಟ್ಟು 231177 ಮತಗಳ ಪೈಕಿ 176416 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರು 96144 ಮತಗಳು, ಭೀಮಪ್ಪ ಗಡಾದ ಅವರು 48816 ಮತಗಳನ್ನು ಪಡೆದಿರುತ್ತಾರೆ. ಅರವಿಂದ ದಳವಾಯಿ ಅವರು ಕೇವಲ 23253 ಮತಗಳನ್ನು ಪಡೆದು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ.
ಅಭಿವೃದ್ಧಿಗೆ ಸಂದ ಜಯ : ದೇವರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ಜಯಶಾಲಿಯಾಗಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಪುರಸ್ಕರಿಸಿದ್ದು, ಈ ಜಯದಿಂದ ಐದನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡುತ್ತಿದ್ದೇನೆ. ಜಯಕ್ಕೆ ಅವಿರತವಾಗಿ ಶ್ರಮಿಸಿರುವ ಎಲ್ಲ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಋಣಿಯಾಗಿರುವುದಾಗಿ ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ನಿರೀಕ್ಷಿಸಿದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಈ ಜಯದಿಂದ ತಮ್ಮ ಜವಾಬ್ದಾರಿ ಇಮ್ಮಡಿಯಾಗಿದೆ ಎಂದು ಹೇಳಿದರು.
ನನ್ನ ವಿರುದ್ಧ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಿದರೂ ಜನರು ಮಾತ್ರ ವಿರೋಧಿಗಳನ್ನು ನಂಬಲಿಲ್ಲ. ಕಳೆದ 14 ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳು ನನ್ನ ಜಯಕ್ಕೆ ಕಾರಣವೆಂದು ಹೇಳಿದರು.
ಎಲ್‍ಇಡಿ ಸ್ಕ್ರೀನ್ ವ್ಯವಸ್ಥೆ : ಕ್ಷೇತ್ರದ ಎಲ್ಲ ಜನರಿಗೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಚುನಾವಣೆ ಫಲಿತಾಂಶ ವೀಕ್ಷಿಸಲು ಎಲ್‍ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಕಾರ್ಯಕರ್ತರು ಬಾಲಚಂದ್ರ ಜಾರಕಿಹೊಳಿ ಅವರು ಗೆಲ್ಲುತ್ತಿದ್ದಂತೆಯೇ ಪರಸ್ಪರ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಕುಣಿದು ಕುಪ್ಪಳಿಸಿದರು. ಬಾಲಚಂದ್ರ ಜಾರಕಿಹೊಳಿ ಅವರನ್ನು ಮೇಲಕ್ಕೆತ್ತಿ ವಿಜಯದ ಸಂಭ್ರಮ ಆಚರಿಸಿದರು.

Related posts: