ರಾಯಬಾಗ:ಎರೆಡು ಗುಂಪುಗಳ ಮಧ್ಯೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ , ಯೋರ್ವಮಹಿಳೆ ಸಾವು
ಎರೆಡು ಗುಂಪುಗಳ ಮಧ್ಯೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ , ಯೋರ್ವಮಹಿಳೆ ಸಾವು
ರಾಯಬಾಗ ಮೆ 30 : ಕ್ರಷರ್ ಮಷೀನ ಸ್ಥಳಾಂತರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ವೇಳೆ ಎರೆಡು ಗುಂಪುಗಳ ಮಧ್ಯೆ ನಡೆದ ಕಲ್ಲು ತೂರಿಟದಲ್ಲಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ
ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದ ರೆಹಮತ್ ಮುಲ್ತಾನಿ (34) ಮೃತಪಟ್ಟಿದ್ದಾರೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಲಸಾಬ ಮುಲ್ತಾನಿ (34), ಪೀರಸಾಬ ಮುಲ್ತಾನಿ (50) ಗೆ ಗಂಭೀರ ಗಾಯಗಳಾಗಿವೆ. ಇನ್ನು ಘಟನೆಯಿಂದ 5ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿವೆ. 1೦ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಂದಿಕುರಳಿ ಗ್ರಾಮಕ್ಕೆ ಎಸ್‌ಪಿ ಸುಧೀರಕುಮಾರ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಫೂಟೇಜ್‌ನ್ನು ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.