RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ :ಜಾನುವಾರುಗಳಿಗೆ ಲಸಿಕಾ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ :ಜಾನುವಾರುಗಳಿಗೆ ಲಸಿಕಾ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ 

ನಗರದ ಪಶು ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡ 14ನೇ ಸುತ್ತಿನ ಕಾಲುಬಾಯಿ ಬೇನೆ ನಿಯಂತ್ರಣಕ್ಕಾಗಿ ಜಾನುವಾರುಗಳಿಗೆ ಲಸಿಕಾ ವಿತರಣೆಯ ಕಾರ್ಯಕ್ರಮಕ್ಕೆ ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ ಅವರು ಚಾಲನೆ ನೀಡಿದರು.

ಜಾನುವಾರುಗಳಿಗೆ ಲಸಿಕಾ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ ಜೂ 2 : ನಗರದ ಪಶು ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡ 14ನೇ ಸುತ್ತಿನ ಕಾಲುಬಾಯಿ ಬೇನೆ ನಿಯಂತ್ರಣಕ್ಕಾಗಿ ಜಾನುವಾರುಗಳಿಗೆ ಲಸಿಕಾ ವಿತರಣೆಯ ಕಾರ್ಯಕ್ರಮಕ್ಕೆ ಜಾನುವಾರಿಗೆ ಪೂಜೆಯನ್ನು ಸಲ್ಲಿಸುವ ಮೂಲಕ ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ|| ಮೋಹನ ಕಮತ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ರೈತರು ತಮ್ಮ ದೈನಂದಿನ ಖರ್ಚು ವೆಚ್ಚಗಳಿಗಾಗಿ ಹೈನುಗಾರಿಕೆಯ ಮೇಲೆ ಹೆಚ್ಚು ಅವಲಂಬಿತರಾಗಿದ್ದರಿಂದ ಆರ್ಥಿಕ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುವ ಜಾನುವಾರಗಳ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಸರಿಯಾದ ಸಂದರ್ಭದಲ್ಲಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ನೀಡುವಲ್ಲಿ ಕಾಳಜಿಯನ್ನು ವಹಿಸಬೇಕು. ಕಾಲುಬಾಯಿ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ರೈತರಿಗೆ ಲಸಿಕೆಯನ್ನು ನೀಡುವ ಕಾರ್ಯವನ್ನು ಹಮ್ಮಿಕೊಂಡಿದ್ದು ಇದರ ಪ್ರಯೋಜನೆಯನ್ನು ರೈತರು ಪಡೆಯಬೇಕೆಂದು ವಿನಂತಿಸಿದರಲ್ಲದೇ ತಾಲೂಕಿನಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜಾನುವಾರುಗಳಿದ್ದು ನಮ್ಮ ಇಲಾಖೆಯ 13 ತಂಡಗಳಿಂದ 95 ಲಸಿಕೆದಾರರು ಮನೆ-ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಸುಧೀರ ಜೋಡಟ್ಟಿ, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ|| ಎಸ್.ಆರ್. ಕೌಜಲಗಿ, ಎ.ಎನ್.ಗಣಾಚಾರಿ, ಇಶಾಕ ಪೀರಜಾದೆ ಸೇರಿದಂತೆ ಅನೇಕರು ಇದ್ದರು

Related posts: