RNI NO. KARKAN/2006/27779|Tuesday, March 11, 2025
You are here: Home » breaking news » ಗೋಕಾಕ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸಗಾಗಿ ನಾಳೆ ಎಬಿವಿಪಿ ಪ್ರತಿಭಟನೆ

ಗೋಕಾಕ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸಗಾಗಿ ನಾಳೆ ಎಬಿವಿಪಿ ಪ್ರತಿಭಟನೆ 

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸಗಾಗಿ ನಾಳೆ ಎಬಿವಿಪಿ ಪ್ರತಿಭಟನೆ

ಗೋಕಾಕ ಜೂ, 5 ;- ರಾಜ್ಯದ ಎಲ್ಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ವು ರಾಜ್ಯಾದ್ಯಂತ ನೀಡಿರುವ ಕರೆಯ ಹಿನ್ನೆಲೆಯಲ್ಲಿ ಇಲ್ಲಿಯ ಎಬಿವಿಪಿ ಸಂಘಟನೆಯು ದಿ. 6 ರಂದು ಮುಂಜಾನೆ 11 ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಕೂಡಿ ನಂತರ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಲಿದೆ.
ಸರ್ಕಾರವು ಎಲ್ಲ ಬಡ, ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು, ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು ಹಾಗೂ ರಾಜ್ಯದಲ್ಲಿ ಕೆಲವೊಂದು ಗ್ರಾಮೀಣ ಭಾಗಗಳು ಬಸ್ ವ್ಯವಸ್ಥೆಯಿಂದ ವಂಚಿತವಾಗಿದ್ದು, ಅಂತಹ ಪ್ರದೇಶಗಳಿಗೆ ಸರ್ಕಾರವು ಬಸ್‍ಗಳನ್ನು ಒದಗಿಸಬೇಕೆಂಬ ಬೇಡಿಕೆಗಳನ್ನು ಇಟ್ಟುಕೊಂಡು ಎಬಿವಿಪಿ ಸಂಘಟನೆಯು ರಾಜ್ಯಾದ್ಯಂತ ಹೋರಾಟ ನಡೆಸಲಿದೆ.
ಕಾರಣ ಗೋಕಾಕ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ದಿ. 6 ರಂದು ಮುಂಜಾನೆ 11 ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೋಕಾಕ ತಾಲೂಕಾ ಸಂಚಾಲಕ ವಿಷ್ಣುಗೌಡ ಪಾಟೀಲ ಹಾಗೂ ಕಾರ್ಯದರ್ಶಿ ಶಿವಾನಂದ ಬಬಲಿ ಅವರು ಜಂಟಿಯಾಗಿ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Related posts: