ಗೋಕಾಕ:ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕವಾಗಿದೆ : ರಮೇಶ ಅಳಗುಂಡಿ
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕವಾಗಿದೆ : ರಮೇಶ ಅಳಗುಂಡಿ
ಬೆಟಗೇರಿ ಜೂ 10 : ಇಂದಿನ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕವಾಗಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಲ್ಲಿ ಶಾಲಾ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಂಡು ತಮ್ಮಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಹೇಳಿದರು.
ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಜೂ.9 ರಂದು ನಡೆದ ಶಾಲಾ ಸಂಸತ್ತು ರಚನೆ, ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿ ಮಾತನಾಡಿದರು.
ಶಾಲೆಯ ಸಹ ಶಿಕ್ಷಕ ಮಲ್ಲಿಕಾರ್ಜುನ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ನಾಯಕತ್ವದ ಗುಣಗಳನ್ನು ಶಾಲಾ ಮಕ್ಕಳು ವಿದ್ಯಾರ್ಥಿ ಬದುಕಿನಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಅಂಬುವುದರ ಕುರಿತು ಮಾತನಾಡಿದರು.
ವಿಧಾನ ಸಭೆ ಶಾಸಕ, ಮಂತ್ರಿಗಳು ಸ್ವೀಕರಿಸುವ ಪ್ರಮಾಣ ವಚನ ಮಾದರಿಯಲ್ಲಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಂಸತ್ತು ರಚನೆ, ಪ್ರಮಾನ ವಚನ ಬೋಧನೆ ಮಾಡಿದ ಬಳಿಕ ಶಾಲಾ ಸಂಸತ್ತ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಯ ಇನ್ನೂಳಿದ ವಿದ್ಯಾರ್ಥಿಗಳು, ಶಿಕ್ಷಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಶಾಲೆಯ ಎಲ್ಲ ಮಕ್ಕಳಿಗೆ, ಶಿಕ್ಷಕರಿಗೆ ಶಾಲಾ ಸಂಸತ್ತ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳು ಸಿಹಿ ವಿತರಿಸಿದರು.
ಮಂಜುನಾಥ ಹತ್ತಿ, ವಿ.ಬಿ.ಬಿರಾದಾರ, ಎ.ಬಿ.ತಾಂವಶಿ, ಮೋಹನ ತುಪ್ಪದ, ರಾಕೇಶ ನಡೋಣಿ, ವೀಣಾ ಹತ್ತಿ, ಶುಭಾ ಬಿ., ಜಯಶ್ರೀ ಇಟ್ನಾಳ, ಮಲ್ಹಾರಿ ಪೋಳ, ಶಿಕ್ಷಕರು, ಸಿಬ್ಬಂದಿ, ಎಸ್‍ಡಿಎಮ್‍ಸಿ ಅಧ್ಯಕ್ಷ, ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.