RNI NO. KARKAN/2006/27779|Friday, November 22, 2024
You are here: Home » breaking news » ಬೆಳಗಾವಿ:2 ವರ್ಷದ ನಂತರ ಸಚಿವ ಸ್ಥಾನದ ಭರವಸೆ : ಸಿ.ಎಂ ಎಚ್ ಡಿ ಕೆ ಬೇಟಿ ನಂತರ ಸತೀಶ ಹೇಳಿಕೆ

ಬೆಳಗಾವಿ:2 ವರ್ಷದ ನಂತರ ಸಚಿವ ಸ್ಥಾನದ ಭರವಸೆ : ಸಿ.ಎಂ ಎಚ್ ಡಿ ಕೆ ಬೇಟಿ ನಂತರ ಸತೀಶ ಹೇಳಿಕೆ 

2 ವರ್ಷದ ನಂತರ ಸಚಿವ ಸ್ಥಾನದ ಭರವಸೆ : ಸಿ.ಎಂ ಎಚ್ ಡಿ ಕೆ ಬೇಟಿ ನಂತರ ಸತೀಶ ಹೇಳಿಕೆ
ಬೆಳಗಾವಿ ಜೂ 16 : ಮದುರೈಯಿಂದ ಬೆಂಗಳೂರಿಗೆ ವಾಪಸಾದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸತೀಶ ಜಾರಕಿಹೊಳಿ ಬೇಟಿ ಮಾಡಿ ಮಹತ್ವದ ವಿಚಾರಗಳನ್ನು ಚರ್ಚಿಸಿದರು
ಜೆಪಿ ನಗರದಲ್ಲಿರುವ ಸಿಎಂ ನಿವಾಸದಲ್ಲಿ ಕುಮಾರಸ್ವಾಮಿಯವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡವೆಂದು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ತಿಳಿಸಿರುವುದಾಗಿ ಹೇಳಿದರು.   
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಬೇಡವೆಂದು ಸ್ಪಷ್ಟಪಡಿಸಿದ್ದೇನೆ. ಈಗಾಗಲೇ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ ಸತೀಶ ಕ್ಷೇತ್ರದ ಅಭಿವೃದ್ಧಿ ಹಾಗೂ ರಾಜಕೀಯ ಕಾರಣದಿಂದ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದು, ತಮಗೆ ಸಚಿವ ಸ್ಥಾನ ಸಿಗದ ಕುರಿತು ಚರ್ಚೆ ನಡೆಸಿಲ್ಲ. ಆದರೆ, ಬೆಳಗಾವಿ ಜಿಲ್ಲೆಗೆ ಬೇರೆ ಆಯ್ಕೆಗಳಿಲ್ಲ. ಎರಡು ವರ್ಷದ ನಂತರ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಗೆ 2ನೇ ಹಂತದಲ್ಲಿ ಸಚಿವ ಸ್ಥಾನಕ್ಕೆ ಅವಕಾಶವಿಲ್ಲ. ಈಗ ಸಂಪುಟ ಸೇರ್ಪಡೆ ಪ್ರಯತ್ನ ಮಾಡುತ್ತಿಲ್ಲ. ಬಂಡಾಯವೂ ಇಲ್ಲ. ಆದರೆ ನಮ್ಮ ಪರವಾಗಿರುವ ಶಾಸಕರ ಹಿತರಕ್ಷಣೆಗಾಗಿ ಹೋರಾಟ ಮುಂದುವರೆಯಲಿದೆ.  ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.  

ಬೆಳಗಾವಿ ನಗರಾಭಿವೃದ್ಧಿಗೆ ಅನುದಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ಜಾರಕಿಹೊಳಿ ತಿಳಿಸಿದರು. ಸಚಿವೆ ಜಯಮಾಲ ಅವರನ್ನ ಸಭಾ ನಾಯಕಿಯಾಗಿ ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ವಿರೋಧ ಇರುವುದು ನಿಜ. ಈ ಬಗ್ಗೆ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಲು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು

Related posts: