ಬೆಳಗಾವಿ:ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ : ಶಾಸಕ ಸತೀಶ
ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ : ಶಾಸಕ ಸತೀಶ
ಬೆಳಗಾವಿ ಜು 4 : ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೆನೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ಅವರ ಜೊತೆಗಿನ ಚರ್ಚೆಯ ಬಳಿಕ ರಾಜಕೀಯ ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಸಚಿವ ಸ್ಥಾನ ಕೈತಪ್ಪಿದಕ್ಕೆ ಕೈ ನಾಯಕರ ಜೊತೆ ಮುನಿಸಿಕೊಂಡಿರುವ ಸತೀಶ್ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅತೃಪ್ತ ಶಾಸಕರಿಗೆ ಏರ್ಪಡಿಸಿದ್ದ ಔತಣಕೂಟಕ್ಕೆ ಗೈರಾಗಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡ ಕಾರಣ ಔತಣಕೂಟದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.
ನಾಳೆ ಸಿಎಂ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುತ್ತಿದ್ದು, ಕಾಂಗ್ರೆಸ್ ಹಳೆ ಯೋಜನೆ ಹಾಗೂ ಜೆಡಿಎಸ್ ಪ್ರಣಾಳಿಕೆ ಯೋಜನೆ ಘೋಷಣೆ ಆಗಲಿವೆ. ರೈತರ ಸಾಲ ಮನ್ನಾ ಸೇರಿದಂತೆ ರಾಜ್ಯದ ಜನತೆಗೆ ಒಳ್ಳೆಯ ಬಜೆಟ್ ನೀಡಲಿದ್ದಾರೆ. ಬಜೆಟ್ ನಂತ್ರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು.