RNI NO. KARKAN/2006/27779|Saturday, December 14, 2024
You are here: Home » breaking news » ಬೆಳಗಾವಿ:ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ:ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ 

ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ ಜು 21: ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿಸಿದರು

ಬೆಳಗಾವಿಯ ಟಿಳಕವಾಡಿಯಲ್ಲಿ ಎಬಿವಿಪಿ ಹಾಗೂ ಎಐಡಿವೈಒ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಳಿಕ ಆರ್​ಪಿಡಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ವಿದ್ಯಾರ್ಥಿಗಳು ಮಾನವ ಸರಪಳಿ ‌ನಿರ್ಮಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಆರ್​ಪಿಡಿ ವೃತ್ತದಲ್ಲಿ ಕೆಲ ಹೊತ್ತು ಸಂಚಾರ ಸಮಸ್ಯೆ ತಲೆದೋರಿತು. ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡುತ್ತಿದ್ದಂತೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

Related posts: