ಬೆಳಗಾವಿ:ಪ್ರತ್ಯೇಕ ರಾಜ್ಯಕ್ಕೆ ಬೆಂಬಲವಿಲ್ಲವೆಂದ ಸತೀಶ
ಪ್ರತ್ಯೇಕ ರಾಜ್ಯಕ್ಕೆ ಬೆಂಬಲವಿಲ್ಲವೆಂದ ಸತೀಶ
ಬೆಳಗಾವಿ ಜು 27 : ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಅನ್ಯಾಯದ ವಿಚಾರವಾಗಿ ಇಂದು ಮಾತನಾಡಿದ ಸತೀಶ ಜಾರಕಿಹೊಳಿ , ಅನ್ಯಾಯ ವಾಗಿರುವದು ಮನವರಿಕೆಯಾದಲ್ಲಿ ಅದರ ವಿರುದ್ಧ ಹೋರಾಟ ಮಾಡಲಾಗುವದು ಎಂದು ತಿಳಿಸಿರುವ ಸತೀಶ ಹಾಸನ, ಮಂಡ್ಯಕ್ಕೆ 200 ಕೋಟಿ ಕೊಟ್ಟಿದ್ದಕ್ಕೆ ಅನ್ಯಾಯ ಅಂತ ಹೇಳಲು ಆಗುವುದಿಲ್ಲ. ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನುದಾನ ಸಿಕ್ಕಿದೆ ಎಂದು ಜಾರಕಿಹೊಳಿ ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಶಾಸಕರು, ಈ ಭಾಗದ ಶಾಸಕರಾಗಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಜನ ಜೆಡಿಎಸ್ ಪಕ್ಷಕ್ಕೆ ವೋಟ್ ಹಾಕದೇ ಇದರಬಹುದು.
ಆದರೆ ಸಮ್ಮಿಶ್ರ ಸರ್ಕಾರದ ಭಾಗಿಯಾಗಿರೋ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ.
ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್ ಕರೆ ವಿಚಾರ ವಾಗಿ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿ ಚಿಂತನೆ ನಡೆಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ. ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.