ಘಟಪ್ರಭಾ:ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ
ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ
ಘಟಪ್ರಭಾ ಅ 10 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜಾಪೂರ ಗ್ರಾಮದಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲೂಕಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಕಬ್ಬಡ್ಡಿ ಆಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಆಕಾಶ ತಳವಾರ 4 ನೂರು ಮೀಟರ್ ಓಟದಲ್ಲಿ, ಉದ್ದ ಜಿಗಿತ, ಶಾಟ್‍ಪುಟ್ ದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಪ್ರೀಯಾಂಕಾ ಮಾಯನ್ನವರ 4 ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕಾ ಮಟ್ಟಕ್ಕೆ ಆಯ್ಕೆಗೊಂಡು ಶಾಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಶಾಲೆಯ ಸ್ಥಳಿಯ ಆಡಳಿತ ಮಂಡಳಿ ಅಧ್ಯಕ್ಷ ಜ್ಯೋತೆಪ್ಪ ಬಂತಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಎಂ.ಆರ್.ಕಡಕೋಳ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.