ಘಟಪ್ರಭಾ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ಘಟಪ್ರಭಾ ಅ 10 : ಸಮೀಪದ ಪಾಮಲದಿನ್ನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಪ್ಪ ಕಾಡಪ್ಪ ಕೌಜಲಗಿ ಹಾಗೂ ಉಪಾಧ್ಯಕ್ಷರಾಗಿ ರಾಮಪ್ಪ ಜಕ್ಕಪ್ಪ ಬಟ್ಟಿ ಅವಿರೋಧವಾಗಿ ಆಯ್ಕೆಯಾದರು.
ಸಂಘದ ನಿರೀಕ್ಷರು ಸಿಡಿಓ ಚುನಾವಣಾ ಅಧಿಕಾರಿಯಾಗಿ ಎಸ್.ಬಿ ಬಿರಾದಾರ ಪಾಟೀಲ ಅವರು ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಮಂಡಳಿಯ ಎಲ್ಲ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು.