ಗೋಕಾಕ:ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಕನ್ನಡ ಶಾಲೆಗಳಿಗೆ ಕಳುಹಿಸಬೇಕು: ರಾಮಣ್ಣ ನೀಲಣ್ಣವರ
ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಕನ್ನಡ ಶಾಲೆಗಳಿಗೆ ಕಳುಹಿಸಬೇಕು: ರಾಮಣ್ಣ ನೀಲಣ್ಣವರ
ಬೆಟಗೇರಿ ಅ 13 : ಗ್ರಾಮೀಣ ವಲಯದ ಸರ್ಕಾರಿ ಕನ್ನಡ ಶಾಲೆಗಳು ಪ್ರಗತಿ ಸಾಧಿಸಲು ಸ್ಥಳೀಯರ ಸಹಾಯ, ಸಹಕಾರ ಅವಶ್ಯಕ. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಕನ್ನಡ ಶಾಲೆಗಳಿಗೆ ಕಳುಹಿಸಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಹೇಳಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ಆ.13ರಂದು ನಡೆದ ಶೂ ಮತ್ತು ಸ್ವಾಕ್ಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸ್ವಾಕ್ಸ್ ವಿತರಿಸಿ ಮಾತನಾಡಿ, ನಾಡಿನ ಪ್ರತಿಯೊಬ್ಬರೂ ಕನ್ನಡ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲ ತರಗತಿಯ ಮಕ್ಕಳಿಗೆ ಶೂ ಮತ್ತು ಸ್ವಾಕ್ಸ್ ವಿತರಿಸಲಾಯಿತು.
ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ.ಬೆಟಗೇರಿ, ಗೀತಾ ಕಮತ, ಎಸ್.ಎಮ್.ಬಿರಾದಾರ, ಎಸ್.ಬಿ.ಸನದಿ, ಎಮ್.ಬಿ. ಸೋಮನಟ್ಟಿ, ಎಸ್.ಜಿ.ಮಠಪತಿ, ಎಮ್.ಎಸ್.ಪಾಟೀಲ ಸೇರಿದಂತೆ ಉಭಯ ಶಾಲೆಗಳ ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಣಪ್ರೇಮಿಗಳು, ಶಿಕ್ಷಕರು, ಸಿಬ್ಬಂದಿ, ಇತರರು ಇದ್ದರು.